
ಮೈಸೂರು: ‘ಕುವೆಂಪು ರಚಿಸಿದ ಸಾಹಿತ್ಯದಲ್ಲಿ ವೈಚಾರಿಕತೆ ಪ್ರಬಲವಾಗಿರುವುದನ್ನು ಕಾಣುತ್ತೇವೆ. ಪ್ರಕೃತಿ ಆರಾಧನೆ, ಕನ್ನಡ, ದೇಶಾಭಿಮಾನ ಸೇರಿದಂತೆ ವಿವಿಧ ಮಜಲುಗಳಲ್ಲೂ ಅದನ್ನು ಕಾಣುತ್ತೇವೆ. ನಾಡಿಗೆ ಅವರ ಕೊಡುಗೆ ಅಪಾರವಾದುದು’ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು.
ಇಲ್ಲಿನ ದೇವರಾಜ ಅರಸು ರಸ್ತೆಯಲ್ಲಿ ‘ಮೈಸೂರು ಯುವ ವೇದಿಕೆ’ಯಿಂದ ಕುವೆಂಪು ಅವರ 121ನೇ ಜನ್ಮ ದಿನಾಚರಣೆ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ನಂತರ, ಸಾರ್ವಜನಿಕರಿಗೆ ಜೀವನಚರಿತ್ರೆ ಪುಸ್ತಕಗಳು ಹಾಗೂ ಸಿಹಿ ವಿತರಿಸಿ ಅವರು ಮಾತನಾಡಿದರು.
‘ನಾವೂ ವೈಚಾರಿಕತೆಯ ವಿಶಾಲ ಮನೋಭಾವ ಬೆಳೆಸಿಕೊಳ್ಳಬೇಕು. ಎಲ್ಲರೊಳಗೆ ಒಂದಾಗಬೇಕು’ ಎಂದರು.
ನಗರಪಾಲಿಕೆ ಮಾಜಿ ಸದಸ್ಯರ ಪ್ರಶಾಂತ್ ಗೌಡ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ, ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ವಸಂತ ಮನೀಶ್, ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಕೆ.ಬಿ.ಲಿಂಗರಾಜು, ವೇದಿಕೆ ಅಧ್ಯಕ್ಷ ಪ್ರಮೋದ್ ಗೌಡ, ಸಂಚಾಲಕ ಸಂದೇಶ್ ಪವಾರ್, ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ವಿನಯ್ ಕುಮಾರ್, ಮುಡಾ ಮಾಜಿ ಸದಸ್ಯ ನವೀನ್ ಕುಮಾರ್, ಚಾಮರಾಜ ಕ್ಷೇತ್ರದ ಅಧ್ಯಕ್ಷ ದಿನೇಶ್ ಗೌಡ, ಚಾಮುಂಡೇಶ್ವರಿ ಕ್ಷೇತ್ರ ಅಧ್ಯಕ್ಷ ರಾಕೇಶ್ ಭಟ್, ವಿಕ್ರಾಂತ್ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಸಿದ್ದೇಶ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.