
ತಿ.ನರಸೀಪುರ: ರಾಷ್ಟ್ರಕವಿ ಕುವೆಂಪು ಅವರ ಜಯಂತಿ ಅಂಗವಾಗಿ ತಾಲ್ಲೂಕಿನ ಕೇತುಪುರ ಸರ್ಕಾರಿ ಪ್ರೌಢಶಾಲೆಯ ಮಕ್ಕಳಿಗೆ ಹಮ್ಮಿಕೊಂಡಿದ್ದ ಚುಟುಕು, ಕವನ, ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ರಾಷ್ಟ್ರಕವಿ ಕುವೆಂಪು ಸಾಹಿತ್ಯ ಸಂಘದ ವತಿಯಿಂದ ಬಹುಮಾನ ವಿತರಿಸಲಾಯಿತು.
ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ವರ್ಷ, ರಸಋಷಿ ಕುವೆಂಪುರವರ ಬದುಕು ಹಾಗೂ ಸಾಹಿತ್ಯ ಕೊಡುಗೆ, ಪ್ರಶಸ್ತಿಗಳು, ವೈಚಾರಿಕತೆ, ವಿಶ್ವ ಮಾನವ ಸಂದೇಶ ವಿಷಯಗಳ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಿದಳು. ಶಿಕ್ಷಕರಾದ ಎಂ.ಸಿ. ಮಂಜುಳಾ, ನವೀದ್, ಸತೀಶ್ ಕುಮಾರ್. ಬಿ. ಆರ್. ಪ್ರಥಮ ದರ್ಜೆ ಸಹಾಯಕ ಪ್ರಶಾಂತ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.