
ಪ್ರಜಾವಾಣಿ ವಾರ್ತೆ
ಮೈಸೂರು ತಾಲ್ಲೂಕಿನ ದೊಡ್ಡಮಾರಗೌಡನಹಳ್ಳಿಯಲ್ಲಿ ಬೋನಿಗೆ ಬಿದ್ದಿರುವ ಚಿರತೆ
ಮೈಸೂರು: ತಾಲ್ಲೂಕಿನ ದೊಡ್ಡಮಾರಗೌಡನಹಳ್ಳಿಯಲ್ಲಿ ಭಾನುವಾರ 8-10 ವರ್ಷದ ಗಂಡು ಚಿರತೆ ಸೆರೆಯಾಗಿದೆ.
ಹಲವು ದಿನಗಳಿಂದ ಈ ಭಾಗದಲ್ಲಿ ಕಾಣಿಸಿಕೊಂಡಿದ್ದ ಚಿರತೆಯನ್ನು ಟಿ.ಕೃಷ್ಣಪ್ಪ ಅವರ ತೋಟದಲ್ಲಿ ಸೆರೆ ಹಿಡಿಯಲಾಗಿದೆ. ಅರಣ್ಯ ಇಲಾಖೆ 10 ದಿನಗಳ ಹಿಂದೆ ಬೋನು ಇರಿಸಿತ್ತು.
ಕೆಲ ದಿನಗಳಿಂದ ಅಡಗಿಕೊಂಡಿದ್ದ ಚಿರತೆ ಮೇಕೆ, ಕುರಿ, ನಾಯಿಗಳನ್ನು ತಿಂದು ಹಾಕಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.