ADVERTISEMENT

ಬೆಟ್ಟದಪುರ | ಕಣಗಾಲು ಗ್ರಾಮದ ಹೊರವಲಯದಲ್ಲಿ ಚಿರತೆ ಕಳೇಬರ ಪತ್ತೆ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2025, 2:30 IST
Last Updated 1 ಸೆಪ್ಟೆಂಬರ್ 2025, 2:30 IST
<div class="paragraphs"><p>ಬೆಟ್ಟದಪುರ ಸಮೀಪದ ಕಣಗಾಲು ಗ್ರಾಮದ ಹೊರವಲಯದಲ್ಲಿ ಚಿರತೆಯ ಕಳೇಬರ ಪತ್ತೆಯಾಗಿರುವುದು.</p></div>

ಬೆಟ್ಟದಪುರ ಸಮೀಪದ ಕಣಗಾಲು ಗ್ರಾಮದ ಹೊರವಲಯದಲ್ಲಿ ಚಿರತೆಯ ಕಳೇಬರ ಪತ್ತೆಯಾಗಿರುವುದು.

   

ಬೆಟ್ಟದಪುರ: ಸಮೀಪದ ಕಣಗಾಲು ಹೊರವಲಯದಲ್ಲಿ ಶನಿವಾರ ಬಂಡೆ ನಡುವೆ ಸಿಕ್ಕಿಹಾಕಿಕೊಂಡ ರೀತಿಯಲ್ಲಿ ಗಂಡು ಚಿರತೆಯೊಂದರ ಕಳೇಬರ ಪತ್ತೆಯಾಗಿದೆ.

ಸ್ಥಳಕ್ಕೆ ಅರಣ್ಯ ಇಲಾಖೆಯ ಆರ್‌ಎಫ್‌ಒ ಪದ್ಮಶ್ರೀ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ADVERTISEMENT

‘ಮೃತಪಟ್ಟಿರುವ ಚಿರತೆಯ ಮರಣೋತ್ತರ ಪರೀಕ್ಷೆಯನ್ನು ಇಲಾಖಾ ಪಶು ವೈದ್ಯಾಧಿಕಾರಿಗಳು ನಡೆಸಿದ್ದು, ಸದರಿ ಚಿರತೆಯ ಮೇಲೆ ಉಗುರಿನ ಗಾಯದ ಗುರುತುಗಳಿವೆ. ಬೇರೆ ಚಿರತೆಯೊಂದಿಗೆ ಕಾದಾಡಿ ಮೃತಪಟ್ಟಿರಬಹುದು ಎಂದು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆ ವೇಳೆ ಚಿರತೆಯ ಅಂಗಾಂಗಗಳ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.