ADVERTISEMENT

ಕಬ್ಬು ಕಟಾವಿನ ವೇಳೆ ಮೂರು ಚಿರತೆ ಮರಿ ಪತ್ತೆ 

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2020, 14:12 IST
Last Updated 3 ಮಾರ್ಚ್ 2020, 14:12 IST
ತಿ.ನರಸೀಪುರ ತಾಲ್ಲೂಕಿನ ತುಂಬಲ ಗ್ರಾಮದ ಜಮೀನಿನಲ್ಲಿ ಪತ್ತೆಯಾಗಿರುವ ಚಿರತೆ ಮರಿಗಳು
ತಿ.ನರಸೀಪುರ ತಾಲ್ಲೂಕಿನ ತುಂಬಲ ಗ್ರಾಮದ ಜಮೀನಿನಲ್ಲಿ ಪತ್ತೆಯಾಗಿರುವ ಚಿರತೆ ಮರಿಗಳು   

ತಿ.ನರಸೀಪುರ: ತಾಲ್ಲೂಕಿನ ತುಂಬಲ ಗ್ರಾಮದ ಜಮೀನೊಂದರಲ್ಲಿ ಮಂಗಳವಾರ ಕಬ್ಬು ಕಟಾವಿನ ವೇಳೆ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.

ಗ್ರಾಮದ ಇರ್ಷಾದ್ ಎಂಬುವರ ಜಮೀನಿನಲ್ಲಿ ಕಬ್ಬು ಕಟಾವು ಮಾಡುವ ವೇಳೆ ಈ ಮೂರು ಮರಿಗಳು ಸಿಕ್ಕಿದ್ದು, ಮೂರ್ನಾಲ್ಕು ದಿನದ ಹಿಂದಷ್ಟೇ ಜನಿಸಿರಬಹುದು ಎನ್ನಲಾಗಿದೆ.

ಅರಣ್ಯ ಇಲಾಖೆಗೆ ಮಾಹಿತಿ ದೊರೆತ ತಕ್ಷಣವೇ ಉಪವಲಯ ಅರಣ್ಯಾಧಿಕಾರಿ ಮಂಜುನಾಥ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮರಿಗಳನ್ನು ವಶಕ್ಕೆ ಪಡೆದಿದ್ದಾರೆ. ಮೇಲಧಿಕಾರಿಗಳ ಸೂಚನೆಯಂತೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.