ನಂಜನಗೂಡು: ತಾಲ್ಲೂಕಿನ ಕಪ್ಪಸೋಗೆ ಗ್ರಾಮದ ಪುಟ್ಟಯ್ಯ ಎಂಬುವವರ ಜಮೀನಿನಲ್ಲಿ ಶುಕ್ರವಾರ ಮರದ ಕೊಂಬೆಗೆ ಸಿಕ್ಕಿಹಾಕಿಕೊಂಡು ಒದ್ದಾಡುತ್ತಿದ್ದ 6 ತಿಂಗಳ ಚಿರತೆ ಮರಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಿಸಿದ್ದಾರೆ.
‘ಚಿರತೆಮರಿ ಆರೋಗ್ಯವಾಗಿದ್ದು, ಕಾಲಿಗೆ ಗಾಯವಾಗಿದೆ ಚಿಕಿತ್ಸೆ ನೀಡಲಾಗುವುದು’ ಎಂದು ಡಿಆರ್‌ಎಫ್ ವಿನೋದ್ ತಿಳಿಸಿದರು.
‘ಮಾದಹಳ್ಳಿ ಗುಡ್ಡದ ಸುತ್ತಮುತ್ತ ಚಿರತೆಗಳ ಹಾವಳಿ ಇದೆ, ರಾತ್ರಿ ವೇಳೆ ರೈತರು ತಮ್ಮ ಜಮೀನುಗಳಿಗೆ ಹೋಗಲು ಭಯ ಪಡುವ ಪರಿಸ್ಥಿತಿ ಉಂಟಾಗಿದೆ.ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಗಳನ್ನು ಸೆರೆಹಿಡಿಯಬೇಕು’ ಎಂದು ಗ್ರಾಮಸ್ಥರು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.