ADVERTISEMENT

ಲಾಕ್‌ಡೌನ್‌: ಸಮರ್ಪಕ ಪ್ಯಾಕೇಜ್‌ಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 15 ಜೂನ್ 2021, 15:28 IST
Last Updated 15 ಜೂನ್ 2021, 15:28 IST
ಕೋವಿಡ್‌ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾದವರಿಗೆ ಸಮರ್ಪಕ ಪ್ಯಾಕೇಜ್‌ ನೀಡಬೇಕು ಎಂದು ಒತ್ತಾಯಿಸಿ ವಿವಿಧ ಎಡಪಕ್ಷಗಳ ಸದಸ್ಯರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಪತ್ರ ಸಲ್ಲಿಸಿದರು
ಕೋವಿಡ್‌ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾದವರಿಗೆ ಸಮರ್ಪಕ ಪ್ಯಾಕೇಜ್‌ ನೀಡಬೇಕು ಎಂದು ಒತ್ತಾಯಿಸಿ ವಿವಿಧ ಎಡಪಕ್ಷಗಳ ಸದಸ್ಯರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಪತ್ರ ಸಲ್ಲಿಸಿದರು   

ಮೈಸೂರು: ಕೋವಿಡ್‌ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾದವರಿಗೆ ಸಮರ್ಪಕ ಪ್ಯಾಕೇಜ್‌ ನೀಡಬೇಕು ಎಂದು ಒತ್ತಾಯಿಸಿ ವಿವಿಧ ಎಡಪಕ್ಷಗಳ ಸದಸ್ಯರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಪತ್ರ ಸಲ್ಲಿಸಿದರು.

ಬೆಡ್, ಲಸಿಕೆ, ಔಷಧ, ಆಮ್ಲಜನಕ ಸೇರಿದಂತೆ ಕೋವಿಡ್‌ ಸಂಬಂಧಿತ ಜಾತಿ, ರಾಜಕೀಯ ತಾರತಮ್ಯ ಪ್ರಕರಣಗಳನ್ನು ಉನ್ನತ ತನಿಖೆಗೆ ಒಳಪಡಿಸಬೇಕು, ಆದಾಯ ತೆರಿಗೆಯಡಿ ಬಾರದ ಎಲ್ಲ ಕುಟುಂಬಗಳಿಗೆ ಮಾಸಿಕ ತಲಾ 10 ಕೆ.ಜಿ ಸಮಗ್ರ ಆಹಾರಧಾನ್ಯ ಮತ್ತು ಆರೋಗ್ಯ ಸುರಕ್ಷತಾ ಸಾಮಗ್ರಿಗಳ ಪೊಟ್ಟಣ ನೀಡಬೇಕು, ಕಾರ್ಮಿಕರ ಉದ್ಯೋಗ ಮತ್ತು ವೇತನ ರಕ್ಷಣೆಗೆ ಆದೇಶ ಹೊರಡಿಸಬೇಕು ಎಂದು ಮನವಿ ಪತ್ರದಲ್ಲಿ ಹೇಳಲಾಗಿದೆ.

ಸಿಪಿಐ(ಎಂ), ಸಿಪಿಐ, ಎಸ್‌ಯುಸಿಐ (ಸಿ), ಸಿಪಿಐ (ಎಂಎಲ್), ಸ್ವರಾಜ್‌ ಇಂಡಿಯಾದ ಪ್ರತಿನಿಧಿಗಳು ತಂಡದಲ್ಲಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.