ADVERTISEMENT

ಮೈಸೂರು | ಲೋಕ ಅದಾಲತ್‌: ಒಂದಾದ 44 ದಂಪತಿ

​ಪ್ರಜಾವಾಣಿ ವಾರ್ತೆ
Published 13 ಜುಲೈ 2025, 2:42 IST
Last Updated 13 ಜುಲೈ 2025, 2:42 IST
ಮೈಸೂರಿನ ನ್ಯಾಯಾಲಯದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಶನಿವಾರ ರಾಷ್ಟ್ರೀಯ ಲೋಕ ಅದಾಲತ್‌ ನಡೆಯಿತು
ಮೈಸೂರಿನ ನ್ಯಾಯಾಲಯದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಶನಿವಾರ ರಾಷ್ಟ್ರೀಯ ಲೋಕ ಅದಾಲತ್‌ ನಡೆಯಿತು   

ಮೈಸೂರು: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಶನಿವಾರ ನಡೆಸಿದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಕೌಟುಂಬಿಕ ವಿವಾದದ ಪ್ರಕರಣಗಳಲ್ಲಿ 44 ದಂಪತಿ ವ್ಯಾಜ್ಯ ಮರೆತು ಒಂದಾದರು.

ಮೈಸೂರು ನಗರ ಮತ್ತು ತಾಲ್ಲೂಕು ನ್ಯಾಯಾಲಯಗಳಲ್ಲಿ ಒಟ್ಟು 1,27,153 ಪ್ರಕರಣಗಳು ವಿಚಾರಣೆಗೆ ಬಾಕಿಯಿದ್ದು, ಅವುಗಳಲ್ಲಿ 39,640 ಪ್ರಕರಣ ರಾಜಿಯಾಗಬಹುದಾದ ಪ್ರಕರಣ ಎಂದು ಗುರುತಿಸಲಾಗಿತ್ತು. ಅವುಗಳ ಪೈಕಿ 22,161 ರಾಜಿ ಸಂಧಾನಕ್ಕಾಗಿ ತೆಗೆದುಕೊಳ್ಳಲಾಗಿದೆ.

‘ರಾಜಿ ಸಂಧಾನಕ್ಕಾಗಿ ತೆಗೆದುಕೊಂಡ ಪ್ರಕರಣಗಳಲ್ಲಿ (ನ್ಯಾಯಾಲಯದಲ್ಲಿ ಬಾಕಿ ಇರುವ) 11,674 ಪ್ರಕರಣಗಳು ಸುಖಾಂತ್ಯಗೊಂಡವು. ರಾಜಿ ಸಂಧಾನ ಮೂಲಕ ಒಟ್ಟು ₹ 72.24 ಲಕ್ಷ ಇತ್ಯರ್ಥಗೊಳಿಸಲಾಗಿದೆ’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶೆ ಉಷಾರಾಣಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT