ಮೈಸೂರು: ಜಿಲ್ಲೆಯ ವಿವಿಧ ಹಂತದ ನ್ಯಾಯಾಲಯಗಳಲ್ಲಿ ಶನಿವಾರ ಏಕಕಾಲಕ್ಕೆ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಬರೋಬ್ಬರಿ 6,505 ಪ್ರಕರಣಗಳು ಇತ್ಯರ್ಥಗೊಂಡವು. ಮನಸ್ಥಾಪದ ಕಾರಣಕ್ಕೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದವರ ಪೈಕಿ 31 ದಂಪತಿ ಮತ್ತೆ ಒಂದಾದರು.
ಮೈಸೂರು ನಗರ ಮತ್ತು ತಾಲ್ಲೂಕುಗಳಲ್ಲಿನ ನ್ಯಾಯಾಲಯಗಳಲ್ಲಿ ಒಟ್ಟು 1,18,974 ಪ್ರಕರಣಗಳು ವಿಚಾರಣೆಗೆ ಬಾಕಿಯಿದ್ದು, ಇವುಗಳಲ್ಲಿ 9,126 ಪ್ರಕರಣಗಳನ್ನು ರಾಜಿ ಸಂಧಾನಕ್ಕಾಗಿ ಅದಾಲತ್‌ಗೆ ತೆಗೆದುಕೊಳ್ಳಲಾಗಿತ್ತು. ಇದರಲ್ಲಿ 6,505 ಪ್ರಕರಣಗಳು ಇತ್ಯರ್ಥಗೊಂಡವು. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜಿ ಸಂಧಾನ ಮೂಲಕ ಒಟ್ಟು ₹36.36 ಕೋಟಿ ಮೊತ್ತದ ಕ್ಲೇಮ್‌ಗಳನ್ನು ಇತ್ಯರ್ಥಪಡಿಸಲಾಯಿತು.
ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ರವೀಂದ್ರ ಹೆಗಡೆ ನೇತೃತ್ವದಲ್ಲಿ ಅದಾಲತ್ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.