
ಮೈಸೂರು: ‘ಮೈಸೂರು– ಕೊಡಗು ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ಬಗ್ಗೆ ಊಹಾಪೋಹ ಹರಡಲಾಗುತ್ತಿದೆ. ಈ ಬಾರಿಯೂ ನನಗೇ ಟಿಕೆಟ್ ಸಿಗಲಿದ್ದು, ಮೂರನೆಯ ಬಾರಿಯೂ ಗೆಲುವು ಸಾಧಿಸುವೆ’ ಎಂದು ಸಂಸದ ಪ್ರತಾಪ ಸಿಂಹ ಪ್ರತಿಪಾದಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಪ್ರಧಾನಿ ನರೇಂದ್ರ ಮೋದಿ ನನ್ನ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿದ್ದಾರೆ. ವರಿಷ್ಠರ ಆಶೀರ್ವಾದ ನನ್ನ ಮೇಲಿದೆ. 10 ವರ್ಷದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಕೈಹಿಡಿಯಲಿವೆ’ ಎಂದರು.
‘ಮೊದಲ ಬಾರಿಗೆ ಬಂದಾಗ ನನ್ನ ಜೊತೆ ಯಾರೂ ಇರಲಿಲ್ಲ. ಪತ್ರಕರ್ತನಾಗಿದ್ದ ನನ್ನನ್ನು ಮೈಸೂರು– ಕೊಡಗಿನ ಜನ ಎರಡು ಬಾರಿ ಗೆಲ್ಲಿಸಿದರು. ಈಗ ಅಪಾರ ಸಂಖ್ಯೆಯ ನಾಯಕರು ಹಾಗೂ ಕಾರ್ಯಕರ್ತರು ನನ್ನ ಜೊತೆಗಿದ್ದಾರೆ. ಬಿಜೆಪಿ– ಜೆಡಿಎಸ್ ನಡುವೆ ಟಿಕೆಟ್ ಹಂಚಿಕೆ ಮಾತಕತೆ ಯಾವಾಗ ಮುಗಿಯುತ್ತದೆ ಎಂಬುದು ಗೊತ್ತಿಲ್ಲ. ಹಂಚಿಕೆ ಬಗ್ಗೆ ವರಿಷ್ಠರು ತೀರ್ಮಾನಿಸುತ್ತಾರೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.