ಮೈಸೂರು:ಇಲ್ಲಿನ ಮಹಾನಗರ ಪಾಲಿಕೆಯ ಅಭಿವೃದ್ಧಿ ವಿಭಾಗದ ಉಪ ಆಯುಕ್ತ ಮಹೇಶ್ ಕುಮಾರ್, ನಗರಾಭಿವೃದ್ಧಿ ಪ್ರಾಧಿಕಾರದ ಎಂಜಿನಿಯರ್ ನಾಗೇಶ್, ಮುಖ್ಯ ಲೆಕ್ಕಾಧಿಕಾರಿ ಮುತ್ತು ಹಾಗೂ ನಂಜನಗೂಡು ನಗರಾಭಿವೃದ್ಧಿ ಪ್ರಾಧಿಕಾರದ ಉಪ ನೋಂದಣಾಧಿಕಾರಿ ಶಿವಶಂಕರಮೂರ್ತಿಯವರ ಮೈಸೂರಿನ ಮನೆಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಕಾರ್ಯಾಚರಣೆ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಲೋಕಾಯುಕ್ತ ಎಸ್.ಪಿ ಸುರೇಶ್ ಬಾಬು ನೇತೃತ್ವದ ತಂಡವು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು, ಮನೆ ಜೊತೆಗೆ ಇತರೆ ಆಸ್ತಿ ದಾಖಲೆಗಳ ಪರಿಶೀಲನೆಯನ್ನೂ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.