ಮೈಸೂರು: ಲೋಕಾಯುಕ್ತ ಪೊಲೀಸರು ನಗರದಲ್ಲಿರುವ ಇಬ್ಬರು ಸರ್ಕಾರಿ ಅಧಿಕಾರಿಗಳ ಮನೆಗೆ ಬುಧವಾರ ಬೆಳಿಗ್ಗೆ ದಾಳಿ ನಡೆಸಿ, ದಾಖಲೆ ಪರಿಶೀಲಿಸುತ್ತಿದ್ದಾರೆ.
ಮೈಸೂರು ಮಹಾನಗರ ಪಾಲಿಕೆಯ ವಲಯ ಕಚೇರಿ 5ರ ವಲಯಾಧಿಕಾರಿ ವೆಂಕಟರಾಮ್ ಅವರ ಸಿದ್ದಾರ್ಥ ಬಡಾವಣೆ ಹಾಗೂ ಕುವೆಂಪು ನಗರದ ಮನೆ ಹಾಗೂ ಕೌಶಲಾಭಿವೃದ್ಧಿ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಮಂಜುನಾಥ ಸ್ಚಾಮಿ ಅವರ ಸಾತಗಳ್ಳಿ ಮತ್ತು ಜೆ.ಪಿ ನಗರದ ನಿವಾಸದ ಮೇಲೆ ದಾಳಿ ನಡೆಸಿದ್ದು, ತನಿಖೆ ಮುಂದುವರೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.