ಮೈಸೂರು: ಮದ್ದೂರಿನಲ್ಲಿ ನಡೆದ ಗಣೇಶ ಮೂರ್ತಿ ಮೆರವಣಿಗೆ ವೇಳೆ ನಡೆದ ಗಲಾಟೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಹಿಂದುತ್ವ ಸಂಘಟನೆ ಕಾರ್ಯಕರ್ತರು ನಗರದ ಗಾಂಧಿ ಚೌಕದಲ್ಲಿ ಗುರುವಾರ ಸಂಜೆ ಪ್ರತಿಭಟಿಸಿದರು.
‘ಮದ್ದೂರಿನಲ್ಲಿ ಗಣಪತಿ ಮೆರವಣಿಗೆ ವೇಳೆ ಗಲಾಟೆ ಖಂಡನೀಯ. ಸರ್ಕಾರವು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ. ಹಿಂದೂ ಹಬ್ಬಗಳನ್ನು ಗುರಿಯಾಗಿಸಿ ಕಲ್ಲುತೂರಾಟಗಳು ನಡೆದರು ಅದನ್ನು ತಡೆಯಲು ಯಾಕೆ ಸಾಧ್ಯವಾಗಿಲ್ಲ. ನ್ಯಾಯ ಕೇಳಿ ಹೋದವರಿಗೂ ಲಾಠಿಯೇಟು ನೀಡಿರುವುದು ಅರಾಜಕತೆಯನ್ನು ಸೂಚಿಸುತ್ತಿದೆ. ಪೊಲೀಸರನ್ನು ಮುಂದೆ ಬಿಟ್ಟು ಹೋರಾಟ ಹತ್ತಿಕ್ಕುವ ಪ್ರಯತ್ನವಾಗುತ್ತಿದೆ’ ಎಂದು ಆರೋಪಿಸಿದರು.
‘ಹಿಂದೂ ಕಾರ್ಯಕರ್ತರ ಬಂಧನ ಮತ್ತು ಸುಳ್ಳು ಅಪಪ್ರಚಾರ ನಿಲ್ಲಿಸಬೇಕು. ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ ಮಾಡಿಸಬಾರದು’ ಎಂದು ಅವರು ಒತ್ತಾಯಿಸಿದರು.
ವಿಶ್ವ ಹಿಂದೂ ಪರಿಷತ್ ಪ್ರಧಾನ ಕಾರ್ಯದರ್ಶಿ ಮಧುಶಂಕರ್, ಪದಾಧಿಕಾರಿಗಳಾದ ಅರುಣಾಚಲಂ, ಕಾಮತ್, ಅಂಬಿಕಾ, ಲೋಕೇಶ್, ವಿಜೇಂದ್ರ, ಹೇಮಾ ನಂದೀಶ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.