ತ್ರಿನೇಶ್ವರಸ್ವಾಮಿ ದೇವಾಲಯದಲ್ಲಿ ಮಹಾಶಿವರಾತ್ರಿ ಅಂಗವಾಗಿ ವಿಶೇಷ ಪೂಜೆ
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಮೂಹ ದೇವಸ್ಥಾನಗಳಲ್ಲಿ ಒಂದಾದ, ಇಲ್ಲಿನ ಅಂಬಾವಿಲಾಸ ಅರಮನೆ ಆವರಣದಲ್ಲಿನ ತ್ರಿನೇಶ್ವರಸ್ವಾಮಿ ದೇವಾಲಯದಲ್ಲಿ ಫೆ. 15ರಂದು ಮಹಾಶಿವರಾತ್ರಿ ಹಬ್ಬದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಂದು ಮೂಲ ದೇವರ ಮೂರ್ತಿಗೆ ಚಿನ್ನದ ಕೊಳಗ(ಮುಖವಾಡ)ವನ್ನು ಧರಿಸಲಾಗುವುದು. ಅಂದು ಬೆಳಿಗ್ಗೆ 6.30ರಿಂದಲೇ ದೇವರ ದರ್ಶನಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ.
ವಿಶೇಷ ಪೂಜೆ, ಅಭಿಷೇಕ, ಪ್ರಸಾದ ವಿತರಣೆ ನಡೆಯಲಿದೆ. ಬೆಳಿಗ್ಗೆ 6.30ರಿಂದ ಸಂಜೆ 4.30ರವರೆಗೆ ಸಾರ್ವಜನಿಕರಿಗೆ ಸಾಮಾನ್ಯ ದರ್ಶನದ ವ್ಯವಸ್ಥೆ ಕಲ್ಪಿಸಲಾಗುತ್ತದೆ. ರಾತ್ರಿ 10ಕ್ಕೆ ‘ಸರ್ಕಾರಿ ಸೇವೆ’ಯ ಮೂಲಕ ಏಕಾದಶಿ ರುದ್ರಾಭಿಷೇಕ ಇರುವುದರಿಂದ, ಬಳಿಕ ಮಧ್ಯರಾತ್ರಿ 12ರವರೆಗೆ ನಿರಂತರ ದರ್ಶನಕ್ಕೆ ಅವಕಾಶ ಇರಲಿದೆ ಎಂದು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ. ರೂಪಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.