
ಎಚ್.ಸಿ. ಮಹದೇವಪ್ಪ
ಮೈಸೂರು: ‘ನಾನಂತೂ ಸದ್ಯಕ್ಕೆ ಸೇಫ್. ಸಚಿವ ಸ್ಥಾನ ಯಾವಾಗ, ಏನಾಗುತ್ತದೆ ಎಂಬ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ’ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಹೇಳಿದರು.
ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಅಧಿಕಾರ ಯಾರಪ್ಪನ ಮನೆಯ ಆಸ್ತಿಯಲ್ಲ. ಶಾಸಕರಾಗಿದ್ದಾಗಲೂ ಕೆಲಸ ಮಾಡಬಹುದು. ಸಚಿವರಾದಾಗಲೂ ಕೆಲಸ ಮಾಡಬಹುದು’ ಎಂದರು.
‘ಜಿಲ್ಲೆಯಲ್ಲಿ 6ರಿಂದ 8 ಹುಲಿಗಳು ಕಾಡಿನಿಂದ ಹೊರಗೆ ಬಂದಿವೆ. ಸರ್ಕಾರ ಹುಲಿ ದಾಳಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ನಿರ್ಲಕ್ಷ್ಯ ತೋರಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಿದೆ’ ಎಂದರು.
‘ಈಗಾಗಲೇ ನಾಲ್ಕು ಕಡೆ ಕೂಂಬಿಂಗ್ ಕಾರ್ಯಾಚರಣೆ ನಡೆದಿದೆ. ಚಾಮರಾಜನಗರದಲ್ಲಿ ಸೋಮವಾರ ಹುಲಿ ದಾಳಿ ಬಗ್ಗೆ ಸಭೆ ಇದ್ದು, ಸಮಗ್ರ ಚರ್ಚೆ ಮಾಡುತ್ತೇವೆ’ ಎಂದರು.
ದಲಿತ ಸಮಾವೇಶ ವಿಚಾರವಾಗಿ ಪ್ರತಿಕ್ರಿಯಿಸಿ ‘ ಕಾಂಗ್ರೆಸ್ ಪಕ್ಷವೇ ಒಂದು ಚಳವಳಿ. ಪಕ್ಷಕ್ಕೆ ಪೂರಕವಾದ ಚಟುವಟಿಕೆಗಳನ್ನು ನಡೆಸಲು ಅನುಮತಿ ಬೇಕಾಗಿಲ್ಲ. ಪಕ್ಷಕ್ಕೆ ವಿರುದ್ಧವಾದ ಸಮಾವೇಶವಾದರೆ ಪಕ್ಷವೇ ಮಧ್ಯ ಪ್ರವೇಶ ಮಾಡುತ್ತದೆ. ದಲಿತ ಸಮಾವೇಶದ ರೂಪುರೇಷೆಗಳು ನಿರಂತರವಾಗಿ ನಡೆಯುತ್ತಿರುತ್ತದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.