ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಸೋಮವಾರ ಘಟನಾ ಸ್ಥಳಕ್ಕೆ ಕರೆ ತಂದ ಪೊಲೀಸರು ಸ್ಥಳ ಮಹಜರು ನಡೆಸಿದರು.
ಆರೋಪಿಗಳು ಘಟನಾ ಸ್ಥಳದಲ್ಲಿ ತಾವು ನಡೆಸಿದ ಕೃತ್ಯಗಳನ್ನು ಪೊಲೀಸರಿಗೆ ವಿವರಿಸಿದರು. ಈ ವೇಳೆ ಡಿಸಿಪಿ ಪ್ರದೀಪ್‌ಗುಂಟಿ ಹಾಗೂ ಇತರ ಹಿರಿಯ ಅಧಿಕಾರಿಗಳು ಇದ್ದರು. ಮಹಜರ್ ಕಾರ್ಯದ ನಂತರ ಆರೋಪಿಗಳನ್ನು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಲಾಯಿತು. ಸ್ಥಳದಲ್ಲಿ ಬಿಗಿಭದ್ರತೆ ಏರ್ಪಡಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.