ಮೈಸೂರು: ಮಹಿಷ ದಸರಾ ಆಚರಣಾ ಸಮಿತಿ ವತಿಯಿಂದ ‘ಮಹಿಷ ದಸರಾ–2021’ ಅ.5ರ ಮಂಗಳವಾರ ಮೈಸೂರಿನಲ್ಲಿ ನಡೆಯಲಿದೆ.
ನಗರದ ವಿಶ್ವಮೈತ್ರಿ ಬುದ್ಧವಿಹಾರದಿಂದ ಅಶೋಕಪುರಂನ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನದವರೆಗೂ ಮಹಿಷ ಮೂರ್ತಿಯ ಮೆರವಣಿಗೆ ಬೆಳಿಗ್ಗೆ 9ಕ್ಕೆ ನಡೆಯಲಿದೆ.
ಮಹಿಷ ಮೂರ್ತಿಗೆ ಪುಷ್ಪಾರ್ಚನೆಗೈಯುವ ಮೂಲ ನಿವಾಸಿಗಳು, ನಂತರ ವಿಚಾರ ಸಂಕಿರಣ ನಡೆಸಲಿದ್ದಾರೆ. ಪ್ರಗತಿಪರರು, ವಿಚಾರವಾದಿಗಳು, ವಿವಿಧ ಮಠಾಧೀಶರು ಇದರಲ್ಲಿ ಭಾಗಿಯಾಗಲಿದ್ದಾರೆ.
‘ಮಹಿಷ ದಸರಾ ಆಚರಣೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ, ನಗರ ಪೊಲೀಸರು ಯಾವುದೇ ಅನುಮತಿ ನೀಡಿಲ್ಲ’ ಎಂದು ಮಾಜಿ ಮೇಯರ್ ಪುರುಷೋತ್ತಮ್ ಸೋಮವಾರ ಇಲ್ಲಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.