ADVERTISEMENT

ಮಹಿಷಾ ದಸರಾ ಇಂದು: ನಿಷೇಧಾಜ್ಞೆ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2024, 6:40 IST
Last Updated 29 ಸೆಪ್ಟೆಂಬರ್ 2024, 6:40 IST

ಮೈಸೂರು: ಮಹಿಷ ದಸರಾ ಆಚರಣೆ ಸಮಿತಿಯು ಭಾನುವಾರ (ಸೆ.29) ‘ಮಹಿಷ ಮಂಡಲೋತ್ಸವ’ದ ಅಂಗವಾಗಿ, ಬೆಳಿಗ್ಗೆ 8.30ಕ್ಕೆ ಚಾಮುಂಡಿ ಬೆಟ್ಟದಲ್ಲಿ ಮಹಿಷ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ, ಪುರಭವನದಲ್ಲಿ ಕಾರ್ಯಕ್ರಮ ನಡೆಸಲಿದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಕಾರ್ಯಕ್ರಮದ ಕುರಿತು ತಮ್ಮ ಫೇಸ್‌ಬುಕ್‌ ಪುಟದಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಸಂಸದ ಪ್ರತಾಪ ಸಿಂಹ, ‘ಬೆಟ್ಟದಲ್ಲಿ ಮಹಿಷನಿಗೆ ಪುಷ್ಪಾರ್ಚನೆ? ಬನ್ನಿ, ನೋಡೆ ಬಿಡೋಣ’ ಎಂದು ಹೇಳಿದ್ದಾರೆ. ಕೆಲವು ದಿನಗಳ ಹಿಂದೆ ಅವರು, ಮಹಿಷ ದಸರಾಕ್ಕೆ ಪ್ರತಿಯಾಗಿ ಚಾಮುಂಡಿ ಬೆಟ್ಟ ಚಲೋ ನಡೆಸುವುದಾಗಿಯೂ ಹೇಳಿದ್ದರು.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದ್ದಂತೆಯೇ, ನಗರ ಪೊಲೀಸ್‌ ಆಯುಕ್ತೆ ಸೀಮಾ ಲಾಟ್ಕರ್‌, ಮಹಿಷ ದಸರಾ ಕಾರ್ಯಕ್ರಮ ನಡೆಯಲಿರುವ ಪುರಭವನ ಹೊರತುಪಡಿಸಿ, ಪರ, ವಿರುದ್ಧ ನಡೆಸುವ ಎಲ್ಲ ಕಾರ್ಯಕ್ರಮಗಳಿಗೆ ಶನಿವಾರ ಮಧ್ಯರಾತ್ರಿ 12ರಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಹೊರಡಿಸಿ ಆದೇಶಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.