ಮೈಸೂರು: ಪತ್ನಿ ನಾಪತ್ತೆಯಾದ ಕುರಿತು ದೂರು ನೀಡಿದ ಪತಿ ಸುರೇಶ್ ವಿರುದ್ಧವೇ ಪತ್ನಿಯ ಕೊಲೆ ಆರೋಪ ಹೊರಿಸಿ ಸುಳ್ಳು ಪ್ರಕರಣ ದಾಖಲಿಸಿದ್ದ ಪ್ರಕರಣದ ಕುರಿತು 5ನೇ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯವು ನೀಡಿದ ಆದೇಶ ಪ್ರಶ್ನಿಸಿ, ಸುರೇಶ್ ಪರ ವಕೀಲರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಪ್ರಕರಣದ ಅಂದಿನ ತನಿಖಾಧಿಕಾರಿ ಬಿ.ಜಿ.ಪ್ರಕಾಶ್, ತಂಡದಲ್ಲಿದ್ದ ಅಂದಿನ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಜಿತೇಂದ್ರ ಕುಮಾರ್, ಬೆಟ್ಟದಪುರ ಪಿಎಸ್‌ಐ ಮಹೇಶ್ ಕುಮಾರ್, ಎಸ್‌ಐ ಪ್ರಕಾಶ್ ಎತ್ತಿಮನಿ ಅವರನ್ನು ಪ್ರತಿವಾದಿ ಗಳನ್ನಾಗಿ ಮಾಡಿ ವಕೀಲ ಕುಮಾರ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ.
‘ತನಿಖಾಧಿಕಾರಿ ಬಿ.ಜಿ.ಪ್ರಕಾಶ್ ವಿರುದ್ಧವಷ್ಟೇ ಪ್ರಕರಣ ದಾಖಲಿಸಲು ಜಿಲ್ಲಾ ನ್ಯಾಯಾಲಯವು ಸೂಚಿಸಿದೆ. ಇತರ ಅಧಿಕಾರಿಗಳ ವಿರುದ್ಧವೂ ಪ್ರಕರಣ ದಾಖಲಿಸಬೇಕು. ಸುರೇಶ್ ಅವರನ್ನು ಸಾಕ್ಷಿದಾರ ಎಂದು ಗುರುತಿಸಬೇಕು ಹಾಗೂ ಆರೋಪಿ ಅಧಿಕಾರಿಗಳು ಸುರೇಶ್‌ಗೆ ₹5 ಕೋಟಿ ಪರಿಹಾರ ನೀಡಬೇಕೆಂದು ಮನವಿ ಸಲ್ಲಿಸಲಾಗಿದೆ’ ಎಂದು ಸುರೇಶ್ ಪರ ವಕೀಲ ಪಾಂಡು ಪೂಜಾರಿ ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.