ADVERTISEMENT

ಮೈಸೂರು ಜಿಲ್ಲೆಯಎಸ್‌ಪಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 2 ಜನವರಿ 2026, 5:59 IST
Last Updated 2 ಜನವರಿ 2026, 5:59 IST
ಮೈಸೂರು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಅಧಿಕಾರ ಸ್ವೀಕರಿಸಿದ ಮಲ್ಲಿಕಾರ್ಜುನ್ ಬಾಲದಂಡಿ ಅವರಿಗೆ ಎಎಸ್‌ಪಿ ಮಲ್ಲಿಕ್‌ ಹೂಗುಚ್ಛ ನೀಡಿ ಸ್ವಾಗತಿಸಿದರು– ಪ್ರಜಾವಾಣಿ ಚಿತ್ರ
ಮೈಸೂರು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಅಧಿಕಾರ ಸ್ವೀಕರಿಸಿದ ಮಲ್ಲಿಕಾರ್ಜುನ್ ಬಾಲದಂಡಿ ಅವರಿಗೆ ಎಎಸ್‌ಪಿ ಮಲ್ಲಿಕ್‌ ಹೂಗುಚ್ಛ ನೀಡಿ ಸ್ವಾಗತಿಸಿದರು– ಪ್ರಜಾವಾಣಿ ಚಿತ್ರ   

ಮೈಸೂರು: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಎಸ್‌ಪಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಎಎಸ್ಪಿಗಳಾದ ಎಲ್. ನಾಗೇಶ್ ಮತ್ತು ಸಿ. ಮಲ್ಲಿಕ್ ಅವರು ನೂತನ ಎಸ್ಪಿ ಮಲ್ಲಿಕಾರ್ಜುನ ಅವರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು.

ಮಲ್ಲಿಕಾರ್ಜುನ ಬಾಲದಂಡಿ 2016ರ ಐಪಿಎಸ್‌ ಬ್ಯಾಚ್‌ ಅಧಿಕಾರಿಯಾಗಿದ್ದು, ಬೆಂಗಳೂರು ಗ್ರಾಮಾಂತರ ಎಸ್‌ಪಿಯಾಗಿ 2 ವರ್ಷ ಕಾರ್ಯನಿರ್ವಹಿಸಿದ್ದರು, ನಂತರ ಮಂಡ್ಯ ಎಸ್ಪಿಯಾಗಿ 1 ವರ್ಷ 6 ತಿಂಗಳು ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಮೈಸೂರು ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಮೈಸೂರು ಎಸ್ಪಿಯಾಗಿದ್ದ ಎನ್. ವಿಷ್ಣುವರ್ಧನ್ ಅವರನ್ನು ಕರ್ನಾಟಕ ಪೊಲೀಸ್ ಅಕಾಡೆಮಿ (ಕೆಪಿಎ) ನಿರ್ದೇಶಕರಾಗಿ ವರ್ಗಾಯಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.