ADVERTISEMENT

ನಂಜನಗೂಡು: ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳ ಸ್ಮರಣೋತ್ಸವ

​ಪ್ರಜಾವಾಣಿ ವಾರ್ತೆ
Published 12 ಜನವರಿ 2026, 5:33 IST
Last Updated 12 ಜನವರಿ 2026, 5:33 IST
ನಂಜನಗೂಡಿನ ಹೊನ್ನಲಗೆರೆ ಮಠದಲ್ಲಿ ಆಯೋಜಿಸಿದ್ದ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳವರ 25ನೇ ಪುಣ್ಯಸ್ಮರಣೋತ್ಸವ ಮತ್ತು ಜನ ಜಾಗೃತಿ ಧಾರ್ಮಿಕ ಸಭೆಯನ್ನುದ್ದೇಶಿಸಿ ರಂಭಾಪುರಿ ಪೀಠದ ಡಾ. ವೀರಸೋಮೇಶ್ವರ ಸ್ವಾಮೀಜಿ ಮಾತನಾಡಿದರು.
ನಂಜನಗೂಡಿನ ಹೊನ್ನಲಗೆರೆ ಮಠದಲ್ಲಿ ಆಯೋಜಿಸಿದ್ದ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳವರ 25ನೇ ಪುಣ್ಯಸ್ಮರಣೋತ್ಸವ ಮತ್ತು ಜನ ಜಾಗೃತಿ ಧಾರ್ಮಿಕ ಸಭೆಯನ್ನುದ್ದೇಶಿಸಿ ರಂಭಾಪುರಿ ಪೀಠದ ಡಾ. ವೀರಸೋಮೇಶ್ವರ ಸ್ವಾಮೀಜಿ ಮಾತನಾಡಿದರು.   

ನಂಜನಗೂಡು: ‘ಮನುಷ್ಯನ ಜೀವನ ಶಾಶ್ವತವಲ್ಲ ಆದರೆ, ಸತ್ಕಾರ್ಯಗಳ ನೆನಪು ಶಾಶ್ವತವಾಗಿ ಉಳಿಯುತ್ತದೆ’ ಎಂದು ಬಾಳೆಹೊನ್ನೂರು  ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ಹೇಳಿದರು.

ನಗರದ ಹೊನ್ನಲಗೆರೆ ಮಠದಲ್ಲಿ ಭಾನುವಾರ ಆಯೋಜಿಸಿದ್ದ ಲಿಂಗೈಕ್ಯ  ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿಯವರ 25ನೇ ಪುಣ್ಯಸ್ಮರಣೋತ್ಸವ ಮತ್ತು ಜನ ಜಾಗೃತಿ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು.

‘ ಅರಿವು, ಆದರ್ಶ ಮತ್ತು ಮೌಲ್ಯಗಳಿಂದ ಮಾನವನ ಬದುಕು ಸಮೃದ್ಧಗೊಳ್ಳಬೇಕು.  ಜೀವನವನ್ನು ಸಾರ್ಥಕವಾಗಿ ರೂಪಿಸಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ,  ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿಯವರು ವೀರಶೈವ ಧರ್ಮದ ಆದರ್ಶಗಳಂತೆ ಭಕ್ತ ಸಮುದಾಯಕ್ಕೆ ಉತ್ತಮ ಸಂಸ್ಕಾರ, ಸದ್ವಿಚಾರ ಮತ್ತು ಧಾರ್ಮಿಕ ಮೌಲ್ಯಗಳನ್ನು ಬೋಧಿಸಿದ ಮಹಾನ್ ತಪಸ್ವಿಗಳಾಗಿದ್ದರು. ಅವರು ಸಮಾಜಕ್ಕೆ ನೀಡಿದ ಸಂದೇಶಗಳು ಅವಿಸ್ಮರಣೀಯವಾಗಿ ಉಳಿಯುತ್ತವೆ’ ಎಂದು ಹೇಳಿದರು.

ADVERTISEMENT

ಹೊನ್ನಲೆಗೆರೆ ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಡಾ. ವೀರಸೋಮೇಶ್ವರ ಜಗದ್ಗುರುಗಳು ನಂಜನಗೂಡಿಗೆ ಆಗಮಿಸಿರುವುದು ಭಕ್ತ ಸಮುದಾಯಕ್ಕೆ ಅಪಾರ ಹರ್ಷವನ್ನು ತಂದಿದೆ. ಶ್ರೀ ಜಗದ್ಗುರು ರೇಣುಕಾದಿ ಪಂಚಾಚಾರ್ಯರ ತತ್ವಸಿದ್ಧಾಂತಗಳು ಹಾಗೂ ಶರಣರ ಸಾಮಾಜಿಕ ಚಿಂತನೆಗಳು ಇಂದಿನ ಸಮಾಜಕ್ಕೆ ದಾರಿದೀಪವಾಗಿವೆ ಎಂದು ಹೇಳಿದರು.

ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ, ರಂಭಾಪುರಿಯ ನಂಜನಗೂಡಿನ ಶಾಖಾ ಮಠಕ್ಕೆ ಮುಜರಾಯಿ ಇಲಾಖೆಯಿಂದ  ಅನುದಾನ ಕೊಡಿಸುವ ಭರವಸೆ ನೀಡಿದರು.

  ನಗರದ ಪ್ರಮುಖ ರಸ್ತೆಗಳಲ್ಲಿ  ರಂಭಾಪುರಿ ಸ್ವಾಮೀಜಿಯವರನ್ನು  ಭವ್ಯ ಸಾರೋಟಿನಲ್ಲಿ ಮೆರವಣಿಗೆ ಮೂಲಕ ಕರೆತರಲಾಯಿತು.  ಶಾಸಕ ಗಣೇಶ್ ಪ್ರಸಾದ್, ಮುಡುಕುತೊರೆ ಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಧನಗೂರು ಮಠದ ಷಡಕ್ಷರ ಶಿವಾಚಾರ್ಯ ಸ್ವಾಮೀಜಿ, ಕಲ್ಲುಬಾಳು ಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ವಾಟಾಳು ಮಠದ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಮಲ್ಲನ ಮೂಲೆ ಮಠದ ಇಮ್ಮಡಿ ಸಿದ್ದಲಿಂಗ ಸ್ವಾಮೀಜಿ, ಶರಣ ಸಂಗಮ ಮಠದ ನಾಗರಾಜೇಂದ್ರ ಸ್ವಾಮೀಜಿ, ನವಿಲೂರು ಮಠದ ಚನ್ನಬಸವ ಸ್ವಾಮೀಜಿ, ರಾಜ್ಯ ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಮಹದೇವಯ್ಯ ಟಿಎಪಿಸಿಎಂಎಸ್ ಅಧ್ಯಕ್ಷ ಕುರಹಟ್ಟಿ ಮಹೇಶ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ಎಸ್.ಎಂ.ಕೆಂಪಣ್ಣ, ದೇವನೂರು ಶಿವಪ್ಪ ದೇವರು, ಖಜಾಂಚಿ ನಟರಾಜು, ದೇವನೂರು ಮಹದೇವಪ್ಪ, ನಂಜಮಣಿ ಗುರುಮಲ್ಲಪ್ಪ, ಎನ್.ಸಿ. ಬಸವಣ್ಣ, ಆರ್.ವಿ.ಮಹದೇವಸ್ವಾಮಿ, ವಿನಯ್ ಕುಮಾರ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.