ADVERTISEMENT

ನಂಜನಗೂಡು| ವೀಲಿಂಗ್ ಮಾಡುತ್ತಿದ್ದ ಯುವಕನ ವಶಕ್ಕೆ ಪಡೆದ ಪೊಲೀಸರು

​ಪ್ರಜಾವಾಣಿ ವಾರ್ತೆ
Published 30 ಜುಲೈ 2023, 12:35 IST
Last Updated 30 ಜುಲೈ 2023, 12:35 IST
ವ್ಹೀಲಿಂಗ್ (ಸಾಂದರ್ಭಿಕ ಚಿತ್ರ)
ವ್ಹೀಲಿಂಗ್ (ಸಾಂದರ್ಭಿಕ ಚಿತ್ರ)   

ನಂಜನಗೂಡು: ನಗರದ ಆಶೀರ್ವಾದ್‌ ಹೋಟೆಲ್‌ ಸಮೀಪದ ಮುಖ್ಯ ರಸ್ತೆಯಲ್ಲಿ ಈಚೆಗೆ ಸ್ಕೂಟರ್‌ನಲ್ಲಿ ವೀಲಿಂಗ್ ಮಾಡುತ್ತಿದ್ದ ಯುವಕನನ್ನು ಬಂಧಿಸಿ, ಸ್ಕೂಟರ್‌ನ್ನು ಸಂಚಾರ ವಿಭಾಗದ ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ರಸ್ತೆಯಲ್ಲಿ ವೀಲಿಂಗ್‌ ಮಾಡುವವರ ಮೇಲೆ ಕಠಿಣ ಕ್ರಮ ವಹಿಸಲಾಗುವುದು’ ಎಂದು ಸಂಚಾರ ವಿಭಾಗದ ಪಿಎಸ್‌ಐ ಯಾಸ್ಮಿನ್‌ ತಾಜ್‌ ಎಚ್ಚರಿಕೆ ನೀಡಿದ್ದಾರೆ.

ಸಂಚಾರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.