ಅಪಘಾತ
–ಪ್ರಾತಿನಿಧಿಕ ಚಿತ್ರ
ಮೈಸೂರು: ಇಲ್ಲಿನ ನಂಜನಗೂಡು ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ವೇಗವಾಗಿ ಬಂದ ಕಾರು ಡಿಕ್ಕಿಯಾಗಿ, ಸ್ಥಳದಲ್ಲೇ ಮೃತಪಟ್ಟರು.
ತಾಲ್ಲೂಕಿನ ಮರಸೆ ಗ್ರಾಮದ ನಿವಾಸಿ ರವಿ (25) ಮೃತ ವ್ಯಕ್ತಿ.
ರವಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಶನಿವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ಹೊರಟಿದ್ದರು. ಮರಸೆ ಗೇಟ್ ಬಳಿ ರಸ್ತೆ ದಾಟಲು ನಿಂತಿದ್ದಾಗ ವೇಗವಾಗಿ ಬಂದ ಕಾರು ಡಿಕ್ಕಿಹೊಡೆಯಿತು. ದಕ್ಷಿಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿನ್ನದ ಸರ ಕಳವು
ಮೈಸೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಪತಿಗೆ ಊಟ ತೆಗೆದುಕೊಂಡು ಆಯರಹಳ್ಳಿ-ಹದಿನಾರು ಗ್ರಾಮದ ರಸ್ತೆಯಲ್ಲಿ ತೆರಳುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿದ ಅಪರಿಚಿತ ವ್ಯಕ್ತಿಯೊಬ್ಬ ₹80 ಸಾವಿರ ಮೌಲ್ಯದ 13 ಗ್ರಾಂ ತೂಕದ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದಾರೆ.
‘ತಾಲ್ಲೂಕಿನ ಆಯರಹಳ್ಳಿ ಗ್ರಾಮದ ನಿವಾಸಿ ಪುಟ್ಟತಾಯಮ್ಮ ಚಿನ್ನದ ಸರ ಕಳೆದುಕೊಂಡವರು. ಸರವನ್ನು ಗಟ್ಟಿಯಾಗಿ ಹಿಡಿದುಕೊಂಡ ಕಾರಣ ಅವರ ಅರ್ಧ ಚಿನ್ನದ ಸರ ಕೈಯಲ್ಲೇ ಉಳಿದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. ವರುಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.