
ಸಾಂದರ್ಭಿಕ ಚಿತ್ರ
(ಎಐ ಚಿತ್ರ)
ಮೈಸೂರು: ನಟಿಸಲು ಬಯುಸುವ ಮಕ್ಕಳು ಜಿಲ್ಲಾಧಿಕಾರಿಯಿಂದ ಅನುಮತಿ ಪತ್ರ ಪಡೆಯುವುದು ಕಡ್ಡಾಯ ಎಂದು ಕಾರ್ಮಿಕ ಇಲಾಖೆ ತಿಳಿಸಿದೆ.
ಶ್ರವಣ ಮತ್ತು ದೃಶ್ಯ ಮಾಧ್ಯಮದ ಯಾವುದೇ ನಿರ್ಮಾಪಕರು ನಿರ್ಮಿಸಿದ ಅಥವಾ ಯಾವುದೇ ವಾಣಿಜ್ಯಪರ ಕಾರ್ಯಕ್ರಮದಲ್ಲಿ ಮಗು ಪಾಲ್ಗೊಳ್ಳುವುದಿದ್ದರೆ, ಆ ಚಟುವಟಿಕೆ ನಡೆಯುವ ಪ್ರದೇಶದ ಜಿಲ್ಲಾ ದಂಡಾಧಿಕಾರಿಯಿಂದ ಪೂರ್ವಾನುಮತಿ ಪಡೆಯಬೇಕು. ನಮೂನೆ ‘ಸಿ’ಯಲ್ಲಿ ಜಿಲ್ಲಾ ದಂಡಾಧಿಕಾರಿಗೆ ಮುಚ್ಚಳಿಕೆ ಪತ್ರ ಸಲ್ಲಿಸಬೇಕು. ಪಾಲ್ಗೊಳ್ಳುವ ಮಕ್ಕಳ ಪಟ್ಟಿ, ಪೋಷಕರು ಅಥವಾ ಪಾಲಕರ ಒಪ್ಪಿಗೆಪತ್ರ ಸಲ್ಲಿಸಬೇಕು. ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಜಿಲ್ಲಾಧಿಕಾರಿ ಅನುಮತಿ ಇಲ್ಲದೆ ಮಕ್ಕಳನ್ನು ನಟನೆಗೆ ಬಳಸಿಕೊಂಡಲ್ಲಿ ಅದು ಕಾನೂನು ಉಲ್ಲಂಘನೆ ಆಗುತ್ತದೆ. ಅಂತಹ ಸಿನಿಮಾ ಅಥವಾ ಧಾರಾವಾಹಿ ಜವಾಬ್ದಾರಿ ಹೊತ್ತ ಆಯೋಜಕರು, ನಿರ್ಮಾಪಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.