ಮೈಸೂರು: ಏರ್ ಇಂಡಿಯಾದ ಅಲಯನ್ಸ್ ಏರ್ ಸಂಸ್ಥೆಯು ಮೈಸೂರು– ಮಂಗಳೂರು ನಡುವೆ ಡಿ.10 ರಿಂದ ವಿಮಾನ ಸೇವೆ ಆರಂಭಿಸಲಿದೆ.
ಬುಧವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರ ವಿಮಾನ ಸೇವೆ ಲಭ್ಯವಿರಲಿದೆ ಎಂದು ಸಂಸದ ಪ್ರತಾಪ ಸಿಂಹ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಮೈಸೂರಿನಿಂದ ಬೆಳಿಗ್ಗೆ 11.15ಕ್ಕೆ ಹೊರಡುವ ವಿಮಾನ ಮಧ್ಯಾಹ್ನ 12.15ಕ್ಕೆ ಮಂಗಳೂರು ತಲುಪಲಿದೆ. ಮಂಗಳೂರಿನಿಂದ ಮಧ್ಯಾಹ್ನ 12.40ಕ್ಕೆ ಹೊರಡುವ ವಿಮಾನ 1.40ಕ್ಕೆ ಮೈಸೂರು ತಲುಪಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.