ADVERTISEMENT

ಹಿರಿಕ್ಯಾತನಹಳ್ಳಿ ಗ್ರಾ.ಪಂ. ಅಧ್ಯಕ್ಷರಾಗಿ ಮಣಿಯಮ್ಮ ಅವಿರೋಧ ಆಯ್ಕೆ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2025, 14:15 IST
Last Updated 28 ಏಪ್ರಿಲ್ 2025, 14:15 IST
ಹುಣಸೂರು ತಾಲ್ಲೂಕಿನ ಹಿರಿಕ್ಯಾತನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾದ ಮಣಿಯಮ್ಮ ಬೆಂಬಲಿಗೊಂದಿಗೆ
ಹುಣಸೂರು ತಾಲ್ಲೂಕಿನ ಹಿರಿಕ್ಯಾತನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾದ ಮಣಿಯಮ್ಮ ಬೆಂಬಲಿಗೊಂದಿಗೆ   

ಹುಣಸೂರು: ತಾಲ್ಲೂಕಿನ ಹಿರಿಕ್ಯಾತನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಮರೂರು ಗ್ರಾಮದ ಸದಸ್ಯೆ ಮಣಿಯಮ್ಮ ಅವಿರೋಧವಾಗಿ ಆಯ್ಕೆಯಾದರು.

ಹಿರಿಕ್ಯಾತನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸೋಮವಾರ ನಡೆದ ಅಧ್ಯಕ್ಷರ (ಪರಿಶಿಷ್ಟ ಪಂಗಡ ಮಹಿಳೆ) ಮೀಸಲು ಸ್ಥಾನಕ್ಕೆ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಜೆಡಿಎಸ್ ಬೆಂಬಲಿತ ಒಮ್ಮತದ ಅಭ್ಯರ್ಥಿಯಾಗಿ ಮಣಿಯಮ್ಮ ನಾಮಪತ್ರ ಸಲ್ಲಿಸಿದ್ದರು. ಇವರ ಪ್ರತಿಸ್ಪರ್ಧಿ ಇಲ್ಲದ ಕಾರಣ ಚುನಾವಣಾಧಿಕಾರಿ ಸಂತೋಷ್ ಕುಮಾರ್ ನಿಯಮಾನುಸಾರ ಚುನಾವಣೆ ಪ್ರಕ್ರಿಯೆ ನಡೆಸಿ ಮಣಿಯಮ್ಮ ಅಯ್ಕೆಯನ್ನು ಪ್ರಕಟಿಸಿದರು.

ಚುನಾವಣೆ ಪ್ರಕ್ರಿಯೆಯಲ್ಲಿ 16 ಸದಸ್ಯರು ಭಾಗವಹಿದ್ದರು. ಗ್ರಾಮದ ಅಭಿವೃದ್ಧಿಗೆ ವಿರೋಧ ಪಕ್ಷದವರ ವಿಶ್ವಾಸ ಪಡೆಯಲಾಗುವುದು ಎಂದು ಮಣಿಯಮ್ಮ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.