ADVERTISEMENT

ಮರದೂರು ನೀರಾವರಿ | ತಿಂಗಳಾಂತ್ಯಕ್ಕೆ ಟೆಂಡರ್‌: ಎಚ್‌.ಪಿ.ಮಂಜುನಾಥ್

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2024, 14:29 IST
Last Updated 17 ಫೆಬ್ರುವರಿ 2024, 14:29 IST
ಎಚ್.ಪಿ. ಮಂಜುನಾಥ್
ಎಚ್.ಪಿ. ಮಂಜುನಾಥ್   

ಹುಣಸೂರು: ‘ರಾಜ್ಯ ಸರ್ಕಾರವು ಬಜೆಟ್‌ನಲ್ಲಿ ಮರದೂರು ಏತ ನೀರಾವರಿ ಯೋಜನೆಗೆ ₹85 ಕೋಟಿ ಮೀಸಲಿಟ್ಟಿದ್ದು, ಟೆಂಡರ್ ಪ್ರಕ್ರಿಯೆ ಫೆಬ್ರುವರಿ ಅಂತ್ಯದೊಳಗೆ ನಡೆಯಲಿದೆ’ ಎಂದು ಕಾಂಗ್ರೆಸ್‌ ಮುಖಂಡ ಎಚ್‌.ಪಿ.ಮಂಜುನಾಥ್ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಕ್ಷೇತ್ರದ ಜನರ ಹಿತದೃಷ್ಟಿಯಿಂದ ಲಕ್ಷ್ಮಣತೀರ್ಥ ನದಿಯಿಂದ ಏತ ನೀರಾವರಿ ಮೂಲಕ ಮರದೂರು ಕೆರೆ ಸೇರಿದಂತೆ 45 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಪ್ರಸ್ತಾವ ಸಲ್ಲಿಸಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಮಾಡಿದ್ದೆ. ಈ ಬಾರಿಯ ಬಜೆಟ್‌ನಲ್ಲಿ ಅನುದಾನ ನೀಡಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ’ ಎಂದರು.

‘ಈ ಯೋಜನೆ ಅನುಷ್ಠಾನಗೊಂಡ ಬಳಿಕ ಬಿಳಿಕೆರೆ ಹೋಬಳಿ ಭಾಗ ಸೇರಿದಂತೆ 30ಕ್ಕೂ ಹೆಚ್ಚು ಗ್ರಾಮಗಳ ನೀರಿನ ಬವಣೆ ನೀಗಲಿದೆ. ಅಂತರ್ಜಲ ವೃದ್ಧಿಗೆ ಸಹಕಾರಿಯಾಗಲಿದೆ’ ಎಂದು ಹೇಳಿದರು.

ADVERTISEMENT

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ರಮೇಶ್, ತಾಲ್ಲೂಕು ಅಧ್ಯಕ್ಷ ನಾರಾಯಣ್, ಮುಖಂಡ ಪುಟ್ಟರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.