ADVERTISEMENT

ಮೈಸೂರು: ಮಾಸ್ಕ್‌ ಬಳಕೆ ಬಗ್ಗೆ ಜಾಗೃತಿ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2020, 2:17 IST
Last Updated 6 ಅಕ್ಟೋಬರ್ 2020, 2:17 IST
ಗಾಂಧೀಜಿ ಪುತ್ಥಳಿಗೆ ಮಾಸ್ಕ್‌ ಹಾಕುವ ಮೂಲಕ ಕೊರೊನಾ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅಜಯ್‌ ಶಾಸ್ತ್ರಿ, ವಿಕ್ರಂ ಅಯ್ಯಂಗಾರ್, ವಿನಯ್ ಕಣಗಾಲ್, ನವೀನ್ ಕೆಂಪಿ, ಸುಚೀಂದ್ರ, ಚಕ್ರಪಾಣಿ ಪಾಲ್ಗೊಂಡಿದ್ದರು
ಗಾಂಧೀಜಿ ಪುತ್ಥಳಿಗೆ ಮಾಸ್ಕ್‌ ಹಾಕುವ ಮೂಲಕ ಕೊರೊನಾ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅಜಯ್‌ ಶಾಸ್ತ್ರಿ, ವಿಕ್ರಂ ಅಯ್ಯಂಗಾರ್, ವಿನಯ್ ಕಣಗಾಲ್, ನವೀನ್ ಕೆಂಪಿ, ಸುಚೀಂದ್ರ, ಚಕ್ರಪಾಣಿ ಪಾಲ್ಗೊಂಡಿದ್ದರು   

ಮೈಸೂರು: ಮೈಸೂರು ಪ್ರಜ್ಞಾವಂತ ನಾಗರಿಕರ ವೇದಿಕೆ ವತಿಯಿಂದ ಸೋಮ ವಾರ ನಗರದಲ್ಲಿ ‘ಮಾಸ್ಕ್‌ ಹಾಕೋಣ, ಕೊರೊನಾ ನಿಯಂತ್ರಿಸೋಣ’ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ನ್ಯಾಯಾಲಯದ ಮುಂಭಾಗದಲ್ಲಿ ಗಾಂಧೀಜಿ ಪ್ರತಿಮೆಗೆ ಮಾಸ್ಕ್‌ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ವೇಳೆ ಮಾತನಾಡಿದ ಯುವ ಮುಖಂಡ ಅಜಯ್‌ ಶಾಸ್ತ್ರಿ, ಕೊರೊನಾ ನಿಯಂತ್ರಣಕ್ಕೆ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸದ ಕಾರಣ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ ಎಂದರು.

ADVERTISEMENT

ಮಾಸ್ಕ್‌ ಹಾಕಿದವರಿಗೆ ಮಾತ್ರ ಮಾರುಕಟ್ಟೆ, ಅಂಗಡಿ, ಸರ್ಕಾರಿ ಕಚೇರಿಗಳಲ್ಲಿ ಪ್ರವೇಶ ನೀಡಬೇಕು. ಪಾಲಿಕೆ ಮತ್ತು ಜಿಲ್ಲಾಡಳಿತ ಈ ಸಂಬಂಧ ವ್ಯಾಪಾರಿಗಳಿಗೆ ಸೂಚನೆ ನೀಡಬೇಕು. ದಸರಾ ಸಮೀಪಿಸುತ್ತಿದ್ದು, ಪ್ರವಾಸಿಗರ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ. ಆದ್ದರಿಂದ ಬೇರೆ ಕಡೆಗಳಿಂದ ನಗರಕ್ಕೆ ಬರುವವರನ್ನು ಕಡ್ಡಾಯವಾಗಿ ಕೋವಿಡ್‌ ಪರೀಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.

ಸಾಮಾಜಿಕ ಹೋರಾಟಗಾರ ವಿಕ್ರಂ ಅಯ್ಯಂಗಾರ್, ವಿನಯ್ ಕಣಗಾಲ್, ನವೀನ್ ಕೆಂಪಿ, ಸುಚೀಂದ್ರ, ಚಕ್ರಪಾಣಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.