ಪ್ರಾತಿನಿಧಿಕ ಚಿತ್ರ
ನಂಜನಗೂಡು: ತಾಲ್ಲೂಕಿನ ಸುತ್ತೂರು ಕ್ಷೇತ್ರದಲ್ಲಿ ಜೂನ್ 8ರಂದು ಸಾಮೂಹಿಕ ವಿವಾಹ ಏರ್ಪಡಿಸಲಾಗಿದ್ದು, ಭಾಗವಹಿಸುವ ವಧು-ವರರು ನೋಂದಣಿ ಮಾಡಿಕೊಳ್ಳಬೇಕು ಎಮದು ಶ್ರೀ ಮಠದ ಪ್ರಕಟಣೆ ತಿಳಿಸಿದೆ.
ವಿವಾಹದಲ್ಲಿ ಭಾಗವಹಿಸುವ ವರನಿಗೆ 21 ವರ್ಷ, ವಧುವಿಗೆ 18 ವರ್ಷ ಪೂರ್ಣಗೊಂಡಿರಬೇಕು, ಅರ್ಜಿ ನಮೂನೆಯಲ್ಲಿ ವರ ಮತ್ತು ವಧುವಿನ ಭಾವಚಿತ್ರಗಳನ್ನು ಲಗತ್ತಿಸಿರಬೇಕು. ಜಾತಿ ದೃಢೀಕರಣ ಪತ್ರ, ವಧು– ವರರ ವಯಸ್ಸಿನ ಬಗ್ಗೆ ಶಾಲೆಯಿಂದ ಪಡೆದ ದಾಖಲಾತಿಯ ದೃಢೀಕರಣ ಪತ್ರ ಲಗತ್ತಿಸಿರಬೇಕು, ಬಾಲ್ಯ ವಿವಾಹಕ್ಕೆ ಅವಕಾಶವಿರುವುದಿಲ್ಲ.
ವಧುವಿಗೆ ಚಿನ್ನದ ಮಾಂಗಲ್ಯ, ಬೆಳ್ಳಿ ಕಾಲುಂಗುರ, ಸೀರೆ, ಕುಪ್ಪಸ ಹಾಗೂ ವರನಿಗೆ ಪಂಚೆ, ಶಲ್ಯ, ಶರ್ಟ್‍ಗಳನ್ನು ಉಚಿತವಾಗಿ ನೀಡಲಾಗುತ್ತದೆ. 8 ದಿನಗಳ ಮುಂಚಿತವಾಗಿ ಆಡಳಿತಾಧಿಕಾರಿಗಳು, ಜೆಎಸ್‍ಎಸ್ ಶಿಕ್ಷಣ ಸಂಸ್ಥೆಗಳು, ಸುತ್ತೂರು ಇವರನ್ನು ನೇರವಾಗಿ ಅಥವಾ ದೂ: 08221–232217, 232033, 9741342222, ಸಂಪರ್ಕಿಸಿ ಮಾಹಿತಿ ಪಡೆದು ನೋಂದಣಿ ಮಾಡಿಸಿಕೊಳ್ಳಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.