ತಿ. ನರಸೀಪುರ: ಎಂಪವರ್ ಅಟ್ಲಾಂಟ, ಸೇವಾ ಮಂದಾರ ಹಾಗೂ ಬೆಂಗಳೂರಿನ ರೋಟರಿ ಕ್ಲಬ್ ವತಿಯಿಂದ ತಾಲ್ಲೂಕಿನ ಮಾವಿನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗೆ ಎಲ್‌ಸಿಡಿ ಪ್ರೊಜೆಕ್ಟರ್ ಹಾಗೂ ಮಕ್ಕಳಿಗೆ ನೋಟ್ ಪುಸ್ತಕ- ಪೆನ್‌ಗಳನ್ನು ಇತ್ತೀಚಿಗೆ ವಿತರಿಸಲಾಯಿತು.
ಈ ವೇಳೆ ಮಾತನಾಡಿದ ಬೆಂಗಳೂರು ರೋಟರಿ ಸಂಸ್ಥೆಯ ಅಧ್ಯಕ್ಷ ಸುದರ್ಶನ ರೆಡ್ಡಿ, ‘ಗ್ರಾಮೀಣ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗುವಂತೆ ಅಗತ್ಯ ಪರಿಕರಗಳನ್ನು ಒದಗಿಸಲು ಬಯಸಿದ್ದು, ಈಗ ಎರಡು ಶಾಲೆಗೂ ಪ್ರೊಜೆಕ್ಟರ್ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಶಾಲೆಗೆ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಎಸ್ಎಸ್ಎಲ್‌ಸಿ ಪರೀಕ್ಷೆಗಳಲ್ಲಿ ಉನ್ನತ ಶ್ರೇಣಿ ಪಡೆಯುವ ಮೂವರು ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಲಾಗುವುದು’ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯಸ್ಥ ವಸಂತ್ ಚಂದ್ರ, ಗ್ರಾಮ ಪಂಚಾಯಿತಿ ಅಧ್ಯಕ್ಷ ಪುಟ್ಟಸ್ವಾಮಿ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಮಹದೇವಮ್ಮ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ರಂಗಮ್ಮ, ಎಸ್‌ಡಿಎಂಸಿ ಅಧ್ಯಕ್ಷ ಚಿಕ್ಕರಂಗ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ರಾಜೇಂದ್ರಪ್ರಸಾದ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದಯಾನಂದ್, ಸದಸ್ಯರು, ಶಿಕ್ಷಕರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.