ADVERTISEMENT

ಮೈಸೂರು ಮೇಯರ್ ಚುನಾವಣೆ: ಬಿಜೆಪಿ ಜೊತೆ ಮೈತ್ರಿಯಾದರೂ ಜೆಡಿಎಸ್‌ಗೆ ಮುಖಭಂಗ!

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2022, 8:55 IST
Last Updated 6 ಸೆಪ್ಟೆಂಬರ್ 2022, 8:55 IST
ಜಿ.ರೂಪಾ
ಜಿ.ರೂಪಾ   

ಮೈಸೂರು: ಮಹಾನಗರಪಾಲಿಕೆ ಮೇಯರ್-ಉಪ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡರೂ ಉಪ ಮೇಯರ್ ಸ್ಥಾನ ಪಡೆಯಲಾಗದೆ ಜೆಡಿಎಸ್ ಮುಖಭಂಗ ಅನುಭವಿಸಿತು.

ಸೋಮವಾರ ನಡೆದ ಚುನಾವಣೆಯಲ್ಲಿ ಮೈತ್ರಿ ಕೂಟದ ಅಭ್ಯರ್ಥಿ ರೇಷ್ಮಾ ಭಾನು ನಾಮಪತ್ರ ತಿರಸ್ಕೃತವಾದ್ದರಿಂದ ಬಿಜೆಪಿಗೆ ಡಬಲ್ ಧಮಾಕಾ ದೊರೆಯಿತು.

ರೇಷ್ಮಾ ಅವರು ಸಾಮಾನ್ಯ ಕ್ಷೇತ್ರದಿಂದ ಗೆದ್ದಿದ್ದಾರೆ. ಉಪ ಮೇಯರ್ ಸ್ಥಾನವು ಹಿಂದುಳಿದ ವರ್ಗ ಎ ಮಹಿಳೆಗೆ ಮೀಸಲಾಗಿದೆ. ಆ ಜಾತಿ ಪ್ರಮಾಣಪತ್ರ ನೀಡದಿದ್ದರಿಂದ ನಾಮಪತ್ರವನ್ನು ಕ್ರಮಬದ್ಧವಾಗಿಲ್ಲ ಎಂದು ತಿರಸ್ಕರಿಸಲಾಗಿದೆ ಎಂದು ಚುನಾವಣಾಧಿಕಾರಿ ಪ್ರಕಾಶ್ ತಿಳಿಸಿದರು. ಇದರಿಂದ ಜೆಡಿಎಸ್ ಆಘಾತ ಅನುಭವಿಸಬೇಕಾಯಿತು.

ADVERTISEMENT

ಜೆಡಿಎಸ್ ಬಂಡಾಯ ಅಭ್ಯರ್ಥಿ ನಿರ್ಮಲಾ ಅವರಿಗೆ ಕಾಂಗ್ರೆಸ್ ಬೆಂಬಲ ನೀಡಿದ್ದರಿಂದ ಅವರು, 27 ಮತಗಳನ್ನು ಪಡೆದರು. ಬಿಜೆಪಿಯ ಜಿ.ರೂಪಾ 45 ಮತಗಳನ್ನು ಗಳಿಸಿ ಗೆಲುವು ಸಾಧಿಸಿದರು.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.