ADVERTISEMENT

ಪಾಲಿಕೆ ಸಭೆ–ಕೋವಿಡ್‌ ಪರೀಕ್ಷೆ ಕಡ್ಡಾಯ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2020, 3:34 IST
Last Updated 3 ಅಕ್ಟೋಬರ್ 2020, 3:34 IST

ಮೈಸೂರು: ಅ.6ರಂದು ನಡೆಯಲಿರುವ ಪಾಲಿಕೆ ಕೌನ್ಸಿಲ್‌ ಸಭೆಯಲ್ಲಿ ಪಾಲ್ಗೊಳ್ಳುವ ಎಲ್ಲರಿಗೂ ಮುನ್ನೆಚ್ಚರಿಕೆ ಕ್ರಮವಾಗಿ ಕೋವಿಡ್‌–19 ಪರೀಕ್ಷೆ ಮಾಡಿಸಲಾಗುವುದು ಎಂದು ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ ತಿಳಿಸಿದರು.

ಸಭೆಯಲ್ಲಿ ಪ್ರಮುಖ ವಿಷಯಗಳು, ಅನುದಾನದ ಬಗ್ಗೆ ಸುಮಾರು ಎಂಟು ತಾಸು ಚರ್ಚೆ ನಡೆಯಲಿದೆ. ಕೋವಿಡ್‌ ಪರಿಸ್ಥಿತಿ ಇರುವ ಕಾರಣ ಪಾಲಿಕೆ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಯ ಆರೋಗ್ಯ ಕಾಳಜಿ ವಹಿಸುವುದು ನಮ್ಮ ಕರ್ತವ್ಯ. ಹೀಗಾಗಿ, ಎಲ್ಲರಿಗೂ ಆರ್‌ಟಿ ಪಿಸಿಆರ್‌ ಪರೀಕ್ಷೆ ಮಾಡಿಸಲಾಗುವುದು. ಮಾಧ್ಯಮದವರನ್ನೂ ಪರೀಕ್ಷೆಗೆ ಒಳಪಡಿಸಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT