ADVERTISEMENT

ಮೇಕೆದಾಟು ಯೋಜನೆಗೆ ಆಕ್ಷೇಪ: ತಮಿಳುನಾಡು ಸಿಎಂ ಸ್ಟಾಲಿನ್ ವಿರುದ್ಧ ಪ್ರತಿಭಟನೆ

ಕೊಡಗಳ ಹಾರವನ್ನು ಕುತ್ತಿಗೆಗೆ ಹಾಕಿಕೊಂಡು ಆಕ್ರೋಶ

​ಪ್ರಜಾವಾಣಿ ವಾರ್ತೆ
Published 6 ಜುಲೈ 2021, 17:07 IST
Last Updated 6 ಜುಲೈ 2021, 17:07 IST
ಮೇಕೆದಾಟು ಯೋಜನೆಗೆ ಆಕ್ಷೇಪ ವ್ಯಕ್ತಪಡಿಸುತ್ತಿರುವ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್‌ ವಿರುದ್ಧ ಮೈಸೂರು ಜಿಲ್ಲಾ ಕನ್ನಡ ಚಳವಳಿಗಾರರ ಸಂಘದ ನೇತೃತ್ವದಲ್ಲಿ ಕಾರ್ಯಕರ್ತರು ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದರು
ಮೇಕೆದಾಟು ಯೋಜನೆಗೆ ಆಕ್ಷೇಪ ವ್ಯಕ್ತಪಡಿಸುತ್ತಿರುವ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್‌ ವಿರುದ್ಧ ಮೈಸೂರು ಜಿಲ್ಲಾ ಕನ್ನಡ ಚಳವಳಿಗಾರರ ಸಂಘದ ನೇತೃತ್ವದಲ್ಲಿ ಕಾರ್ಯಕರ್ತರು ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದರು   

ಮೈಸೂರು: ಮೇಕೆದಾಟು ಯೋಜನೆಗೆ ಆಕ್ಷೇಪ ವ್ಯಕ್ತಪಡಿಸುತ್ತಿರುವ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್‌ ವಿರುದ್ಧ ಮೈಸೂರು ಜಿಲ್ಲಾ ಕನ್ನಡ ಚಳವಳಿಗಾರರ ಸಂಘದ ನೇತೃತ್ವದಲ್ಲಿ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೇರಿದ ಅವರು, ಖಾಲಿ ಕೊಡಗಳ ಹಾರವನ್ನು ಕುತ್ತಿಗೆಗೆ ಹಾಕಿಕೊಂಡು ಆಕ್ರೋಶ ವ್ಯಕ್ತಪಡಿಸಿದರು.

ಮೇಕೆದಾಟು ಯೋಜನೆ ಕೈಬಿಡಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸ್ಟಾಲಿನ್ ಪತ್ರ ಬರೆದಿರುವುದು ಸರಿಯಲ್ಲ ಎಂದು ಖಂಡಿಸಿದ ಅವರು, ಸರ್ಕಾರ ಕೂಡಲೇ ಈ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ತಮಿಳುನಾಡು ಸರ್ಕಾರವು ಕಾವೇರಿ ನದಿ ನೀರಿನ 45 ಟಿಎಂಸಿ ಹೆಚ್ಚುವರಿ ನೀರನ್ನು ಬಳಸಿಕೊಳ್ಳುತ್ತಿರುವುದು ಸಹ ಸರಿಯಲ್ಲ ಎಂದು ಅವರು ಖಂಡಿಸಿದರು.

ಸಂಘದ ಅಧ್ಯಕ್ಷ ಬಿ.ಎ.ಶಿವಶಂಕರ್, ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಸಹಕಾರ ಸಂಘದ ಅಧ್ಯಕ್ಷ ಸಿ.ಜೆ.ಗಂಗಾಧರ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.