ADVERTISEMENT

ಅಂಬರೀಷ್ ಅಣ್ಣ ಆನಂದ್‌ ಕುಮಾರ್‌ ನಿಧನ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2019, 9:39 IST
Last Updated 21 ಸೆಪ್ಟೆಂಬರ್ 2019, 9:39 IST
ಎಂ.ಎಚ್.ಆನಂದ್ ಕುಮಾರ್
ಎಂ.ಎಚ್.ಆನಂದ್ ಕುಮಾರ್   

ಮೈಸೂರು: ಅಂಬರೀಷ್ ಅವರ ಅಣ್ಣ ಎಂ.ಎಚ್.ಆನಂದ್ ಕುಮಾರ್(76) ಅವರು ಶನಿವಾರ ಮೈಸೂರಿನಲ್ಲಿ ನಿಧನರಾದರು. ಅವರಿಗೆ ಪತ್ನಿ, ಮೂವರು ಮಕ್ಕಳು ಇದ್ದಾರೆ.

ಉಸಿರಾಟದ ತೊಂದರೆಯಿಂದ ಬಳಲಿದ್ದ ಅವರನ್ನು ಶುಕ್ರವಾರ ರಾತ್ರಿ ಜಯದೇವ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಚಾಮರಾಜಪುರಂನಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಮೆರಿಕದಲ್ಲಿರುವ ಮಗ ಬಂದ ಬಳಿಕ ಅಂತ್ಯಕ್ರಿಯೆ ನಡೆಯಲಿದೆ.

ADVERTISEMENT

ಅಂಬರೀಷ್‌ ಅವರು ಕಳೆದ ವರ್ಷ ನವೆಂಬರ್‌ 24 ರಂದು ನಿಧನರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.