ತಿ.ನರಸೀಪುರ: ತಾಲ್ಲೂಕಿನ ಬನ್ನೂರು ಹೋಬಳಿಯ ಮೆಣಸಿನಕ್ಯಾತನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2024-25ನೇ ಸಾಲಿನಲ್ಲಿ ₹3.29 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಕಾರ್ಯನಿರ್ವಾಹಣಾಧಿಕಾರಿ ಎಂ. ಎಸ್.ರವಿ ತಿಳಿಸಿದರು.
ಸಂಘದ ಆವರಣದಲ್ಲಿ ಅಧ್ಯಕ್ಷ ತಿಮ್ಮೇಗೌಡ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ವರದಿ ಮಂಡಿಸಿದ ಅವರು, ‘ಸದಸ್ಯರಿಂದ ₹1.16ಕೋಟಿ ಮೌಲ್ಯದ ಹಾಲು ಖರೀದಿಸಲಾಗಿದೆ. ಲಾಭದಲ್ಲಿ ₹1.36 ಲಕ್ಷವನ್ನು ಸದಸ್ಯರಿಗೆ ಬೋನಸ್ ರೂಪದಲ್ಲಿ ವಿತರಿಸಲಾಗಿದೆ’ ಎಂದು ಮಾಹಿತಿ ನೀಡಿದರು.
ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವೇಳೆ ವೈಜ್ಞಾನಿಕ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದ, ಪ್ರಸ್ತುತ ಹುಣಸೂರು ತಾಲ್ಲೂಕಿನಲ್ಲಿ ಸೇವೆಯಲ್ಲಿರುವ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ವಿಜೇತ ಎಚ್.ಎನ್.ಗಿರೀಶ್ ಅವರನ್ನು ಸಂಘ ಹಾಗೂ ಹಳೆಯ ವಿದ್ಯಾರ್ಥಿಗಳು ಸೇರಿ ಅಭಿನಂದಿಸಿದರು.
ಒಕ್ಕೂಟದ ಮಾರ್ಗ ವಿಸ್ತರಣಾಧಿಕಾರಿ ದಿವ್ಯಶ್ರೀ, ಮೈಮುಲ್ ನಿರ್ದೇಶಕ ಓಂ ಪ್ರಕಾಶ್, ಮಹದೇವ, ಮಹೇಶ ಸುರೇಶ, ಕೃಷ್ಣೆಗೌಡ, ಮಂಜುಗೌಡ, ಚಿಕ್ಕರಾಜು, ಮಹೇಶ್ ಎಂ.ಎಸ್.ಬೋರಯ್ಯ, ಪಶುವೈದ್ಯ ಕಾರ್ತಿಕ್ , ಸಂಘದ ಸದಸ್ಯರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.