ADVERTISEMENT

ಸರೋದ್ ವಾದಕ ಪಂಡಿತ್‌ ರಾಜೀವ ಆರೋಗ್ಯ ವಿಚಾರಿಸಿದ ಎಚ್‌.ಸಿ. ಮಹದೇವಪ್ಪ

​ಪ್ರಜಾವಾಣಿ ವಾರ್ತೆ
Published 26 ಮೇ 2024, 16:21 IST
Last Updated 26 ಮೇ 2024, 16:21 IST
ಮೈಸೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸರೋದ್ ವಾದಕ ಪಂಡಿತ್‌ ರಾಜೀವ ತಾರಾನಾಥ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಭಾನುವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು
ಮೈಸೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸರೋದ್ ವಾದಕ ಪಂಡಿತ್‌ ರಾಜೀವ ತಾರಾನಾಥ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಭಾನುವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು   

ಮೈಸೂರು: ಇಲ್ಲಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಸರೋದ್ ವಾದಕ ಪಂಡಿತ್‌ ರಾಜೀವ ತಾರಾನಾಥ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಭಾನುವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ವೈದ್ಯರಿಂದ ಮಾಹಿತಿ ಪಡೆದರು. ಕುಟುಂಬದವರೊಂದಿಗೆ ಚರ್ಚಿಸಿದರು.

ಸರ್ಕಾರದಿಂದ ನೆರವು ದೊರಕಿಸುವ ಕುರಿತು ಮುಖ್ಯಮಂತ್ರಿ ಜೊತೆ ಚರ್ಚಿಸುವ ಭರವಸೆ ನೀಡಿದರು.

ADVERTISEMENT

ಜಿಲ್ಲಾ ಕಾಂಗ್ರೆಸ್ ಸಾಂಸ್ಕೃತಿಕ ಸಮಿತಿ ಅಧ್ಯಕ್ಷೆ ಶ್ವೇತಾ ಮಡಪ್ಪಾಡಿ ಜತೆಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.