
ಪ್ರಜಾವಾಣಿ ವಾರ್ತೆ
ಮೈಸೂರು: ಮೈಸೂರು ಜಿಲ್ಲಾ ಮತ್ತು ನಗರ ಪೊಲೀಸರು ಅಂಬಾವಿಲಾಸ ಅರಮನೆ ಮುಂಭಾಗ ಆಯೋಜಿಸಿರುವ 'ಕರ್ನಾಟಕ ರಾಜ್ಯ ಪೊಲೀಸ್ ರನ್' ಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಚಾಲನೆ ನೀಡಿದರು.
ಬಳಿಕ ಮಾತನಾಡಿ, 'ಕರ್ನಾಟಕ ಪೊಲೀಸ್ ಕಾರ್ಯದಕ್ಷತೆ ನಾವೆಲ್ಲಾ ಹೆಮ್ಮೆ ಪಡುವಂತೆ ಮಾಡಿದೆ. ಇಲಾಖೆಯ ಕೆಲಸ ಕಠಿಣವಾಗಿದ್ದು, ಮೈಯೆಲ್ಲಾ ಕಣ್ಣಾಗಿರಬೇಕು. ಜನರಲ್ಲಿ ಮಾಹಿತಿ, ಶಿಕ್ಷಣ, ಸಂವಹನದ ಮೂಲಕ ಜಾಗೃತಿ ಮೂಡಿಸಿ ಉತ್ತಮ ಸಮಾಜ ಕಟ್ಟಲಾಗುತ್ತಿದೆ' ಎಂದರು.
ನೂರಾರು ಸಾರ್ವಜನಿಕರು ಹಾಗೂ ಪೊಲೀಸರು 5 ಸಾವಿರ ಮತ್ತು 10 ಸಾವಿರ ಕಿ.ಮೀ ಓಟದಲ್ಲಿ ಭಾಗವಹಿಸಿದರು.
ಶಾಸಕರಾದ ಜಿ.ಟಿ.ದೇವೇಗೌಡ, ಟಿ.ಎಸ್.ಶ್ರೀವತ್ಸ, ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯಿತಿ ಸಿಇಒ ಯುಕೇಶ್ ಕುಮಾರ್, ಡಿಸಿಎಫ್ ಪರಮೇಶ್, ಡಿಸಿಪಿ ಕೆ.ಎಸ್.ಸುಂದರ್ ರಾಜ್ ಭಾಗವಹಿಸಿದರು.