ADVERTISEMENT

ದಸರಾ ಗಜಪಡೆಗೆ ಪೂಜೆ ಸಲ್ಲಿಸಿದ ಸಚಿವ ಎಸ್.ಟಿ.ಸೋಮಶೇಖರ್

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2020, 11:55 IST
Last Updated 25 ಅಕ್ಟೋಬರ್ 2020, 11:55 IST
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಭಾನುವಾರ ಮಹಾನವಮಿ, ಆಯುಧಪೂಜೆ ಅಂಗವಾಗಿ ಇಲ್ಲಿನ ಅರಮನೆ ಆವರಣದಲ್ಲಿ ಜಂಬೂ ಸವಾರಿಯಲ್ಲಿ ಭಾಗಿಯಾಗುವ ಮೂಲಕ ಗಜಪಡೆಗೆ ವಿಶೇಷ ಪೂಜೆ ಸಲ್ಲಿಸಿದರು
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಭಾನುವಾರ ಮಹಾನವಮಿ, ಆಯುಧಪೂಜೆ ಅಂಗವಾಗಿ ಇಲ್ಲಿನ ಅರಮನೆ ಆವರಣದಲ್ಲಿ ಜಂಬೂ ಸವಾರಿಯಲ್ಲಿ ಭಾಗಿಯಾಗುವ ಮೂಲಕ ಗಜಪಡೆಗೆ ವಿಶೇಷ ಪೂಜೆ ಸಲ್ಲಿಸಿದರು   
""
""

ಮೈಸೂರು: ನಾಡಹಬ್ಬ ದಸರಾ ಅಂಗವಾಗಿ ನಡೆಯುವ ಆಯುಧ ಪೂಜೆ ಹಿನ್ನೆಲೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಜಂಬೂ ಸವಾರಿಯಲ್ಲಿ ಭಾಗವಹಿಸುವ ಗಜಪಡೆಗೆ ವಿಶೇಷ ಪೂಜೆ ಸಲ್ಲಿಸಿದರು.

ಭಾನುವಾರ ಸೋಮೇಶ್ವರ ದೇವಾಲಯದ ಮುಂಭಾಗ ಅಭಿಮನ್ಯು ಮತ್ತು ತಂಡಕ್ಕೆ ಪೂಜಾ ಕಾರ್ಯ ನೆರವೇರಿಸಿದ ಅವರು, ಜಂಬೂ ಸವಾರಿ ನಿರ್ವಿಘ್ನವಾಗಿ ನೆರವೇರಲೆಂದು ಪ್ರಾರ್ಥನೆ ಸಲ್ಲಿಸಿ, ಗಜಪಡೆಗೆ ಹಣ್ಣು-ಬೆಲ್ಲ ನೀಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪ್ರದಾಯದಂತೆ ನಾಡಹಬ್ಬ ದಸರಾ ಮಹೋತ್ಸವದ ಜಂಬೂ ಸವಾರಿಯಲ್ಲಿ ಭಾಗವಹಿಸುವ ಗಜಪಡೆಗೆ ಪೂಜೆ ಸಲ್ಲಿಸಲಾಗಿದೆ. ತಾಯಿ ಚಾಮುಂಡೇಶ್ವರಿ ಕೊರೊನಾ ಮುಕ್ತವಾಗಿಸಲಿ ಎಂದು ಪ್ರಾರ್ಥಿಸಲಾಗಿದೆ ಎಂದರು.

ADVERTISEMENT

ಸೋಮವಾರ ನಡೆಯಲಿರುವ ದಸರಾ ಜಂಬೂ ಸವಾರಿಗೆ ಎಲ್ಲಾ ರೀತಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೋವಿಡ್ ರಾಜ್ಯ ಮಟ್ಟದ ಸಲಹಾ ಸಮಿತಿಯ ಸಲಹೆಯಂತೆ ಅರಮನೆ ಆವರಣದಲ್ಲಿ 300 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ದಸರಾ ಸಂದರ್ಭದಲ್ಲಿ ಕೊರೊನಾ ಸೋಂಕು ಹರಡದಂತೆ ಅನೇಕ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಜನಸಂದಣಿ ಉಂಟಾಗದಂತೆ ಮುನ್ನೆಚ್ಚರಿಕೆಯಿಂದ ಎಲ್ಲಾ ಸಾಂಸ್ಕøತಿಕ ಕಾರ್ಯಕ್ರಮವನ್ನು ವರ್ಚುವಲ್ ಆಗಿ ನಡೆಸಿದ್ದು, ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಿವೆ ಎಂದರು.

ಕಳೆದ ಎಂಟು ದಿನಗಳಲ್ಲಿ ಆರಮನೆ ಆವರಣದಲ್ಲಿ ಜರುಗಿದ ಎಲ್ಲಾ ಕಾರ್ಯಕ್ರಮಗಳನ್ನು 6 ಲಕ್ಷ ಮಂದಿ ವೀಕ್ಷಿಸಿದ್ದಾರೆ. ಅದರಂತೆ ಜಂಬೂ ಸವಾರಿ ಮೆರವಣಿಗೆಯು ಕೂಡ ವರ್ಚುವಲ್‍ನಲ್ಲಿ ನಡೆಯಲಿದ್ದು, ಸಾರ್ವಜನಿಕರು ಮನೆಯಲ್ಲಿ ಕುಳಿತು ವೀಕ್ಷಿಸಬೇಕು ಎಂದರು.

ಈ ಸಂದರ್ಭದಲ್ಲಿ ಶಾಸಕ ಎಲ್.ನಾಗೇಂದ್ರ, ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್, ಡಿಸಿಎಫ್ ಅಲೆಕ್ಸಾಂಡರ್, ಗಜಪಡೆಯ ವೈದ್ಯ ಡಾ.ನಾಗರಾಜ್ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.