ADVERTISEMENT

ಜನರಿಗೆ ತೊಂದರೆ ಆಗದಂತೆ ಕಾಮಗಾರಿ ನಡೆಯಲಿ: ಸಚಿವ ವೆಂಕಟೇಶ್

ಸಿ.ಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಸಚಿವ ಕೆ.ವೆಂಕಟೇಶ್

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2025, 5:22 IST
Last Updated 1 ಆಗಸ್ಟ್ 2025, 5:22 IST
ಬೆಟ್ಟದಪುರ ಸಮೀಪದ ಕಿತ್ತೂರು ಗ್ರಾಮದಲ್ಲಿ ಗುರವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪಶುಸಂಗೋಪನೆ ಹಾಗೂ ರೇಷ್ಮೆ ಇಲಾಖೆ ಸಚಿವ ಕೆ.ವೆಂಕಟೇಶ್ ಭೂಮಿ ಪೂಜೆ ನೆರವೇರಿಸಿದರು 
ಬೆಟ್ಟದಪುರ ಸಮೀಪದ ಕಿತ್ತೂರು ಗ್ರಾಮದಲ್ಲಿ ಗುರವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪಶುಸಂಗೋಪನೆ ಹಾಗೂ ರೇಷ್ಮೆ ಇಲಾಖೆ ಸಚಿವ ಕೆ.ವೆಂಕಟೇಶ್ ಭೂಮಿ ಪೂಜೆ ನೆರವೇರಿಸಿದರು    

ಬೆಟ್ಟದಪುರ: ಅಧಿಕಾರಿಗಳು ಅಭಿವೃದ್ಧಿ ಕಾಮಗಾರಿಗಳ ಕೆಲಸವನ್ನು ನಡೆಸುವ ಸಂದರ್ಭ ಸಾರ್ವಜನಿಕರಿಗೆ ಮತ್ತು ಸ್ಥಳೀಯ ನಿವಾಸಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ಕೆಲಸಗಳನ್ನು ಪೂರ್ಣಗೊಳಿಸಬೇಕು ಎಂದು ಪಶುಸಂಗೋಪನಾ ಹಾಗೂ ರೇಷ್ಮೆ  ಸಚಿವ ಕೆ.ವೆಂಕಟೇಶ್ ಹೇಳಿದರು.

ಸಮೀಪದ ಕಿತ್ತೂರು ಗ್ರಾಮದಲ್ಲಿ ಗುರವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ‘ಗ್ರಾಮಗಳಿಗೆ ಪ್ರವಾಸ ಕೈಗೊಂಡಾಗ ಸ್ಥಳೀಯ ಜನರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಒದಗಿಸುವ ನಿಟ್ಟಿನಲ್ಲಿ ಹಾಗೂ ತಾಲ್ಲೂಕಿನ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ’ ಎಂದರು.

ಇದೇ ವೇಳೆ ಕಲ್ಯಾಣಿಗೌಡನ ಕೊಪ್ಪಲು ಹಾಗೂ ಹೊನ್ನೇನಹಳ್ಳಿ ಗ್ರಾಮಗಳಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ADVERTISEMENT

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಟಿ ಸ್ವಾಮಿ, ರಹಮತ್ ಜಾನ್ ಬಾಬು, ಗ್ರಾ.ಪಂ ಅಧ್ಯಕ್ಷ ವೀಣಾ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುಮಿತ್, ಮುಖಂಡರಾದ ಕೃಷ್ಣಪ್ಪ, ಗಣೇಶ್, ಪುಟ್ಟರಾಜು, ಶೇಖರ್, ಲಕ್ಷ್ಮೀನಾರಾಯಣ, ತಹಶೀಲ್ದಾರ್ ನಿಸರ್ಗಪ್ರಿಯಾ, ಇಒ ಸುನೀಲ್, ಲೋಕೋಪಯೋಗಿ ಇಲಾಖೆಯ ಎಇಇ ಎಂ.ಆರ್ ವೆಂಕಟೇಶ್, ಎಂಜಿನಿಯರ್ ಕುಮಾರ್, ದಿನೇಶ್, ವಿಜಯ್, ಸುಂದರ್ ರಾಜ್, ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಸೋಮಯ್ಯ, ಸಿಪಿಐ ದೀಪಕ್, ಪಿಎಸ್ಐ ಅಜಯ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಮುಖಂಡರು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು.

ರಾಜ್ಯದಲ್ಲಿ ನಮ್ಮ ಸರ್ಕಾರವು ಬಡವರ ಪರ ಯೋಜನೆಗಳನ್ನು ನೀಡುವ ಮೂಲಕ ಜನಪರ ಸರ್ಕಾರವಾಗಿದೆ
ಕೆ.ವೆಂಕಟೇಶ್ ಪಶುಸಂಗೋಪನಾ ಹಾಗೂ ರೇಷ್ಮೆ  ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.