ಮೈಸೂರು: ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ಶಾಸಕ ತನ್ವೀರ್ ಸೇಠ್ ಇಲ್ಲಿ ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.
ವಿಧಾನ ಪರಿಷತ್ ಚುನಾವಣೆಯಲ್ಲಿ ಮೈಸೂರು-ಚಾಮರಾಜನಗರ ಕ್ಷೇತ್ರದಿಂದಕಾಂಗ್ರೆಸ್‌ಗೆಗೆಲ್ಲುವಷ್ಟು ಮತಗಳು ಇವೆ. ಈ ಬಲದಿಂದಲೇ ಮೊದಲ ಸುತ್ತಿನಲ್ಲೆ ಗೆಲುವು ಸಾಧ್ಯ.ಜಿ.ಟಿದೇವೆಗೌಡರ ಬೆಂಬಲ ಕಾಂಗ್ರೆಸ್‌ಗೆ ಇದೆ ಎಂದರು
ಜೆಡಿಎಸ್ ನ ಅವಕಾಶವಾದಿ ರಾಜಕಾರಣದ ಕುರಿತು ಮಾತನಾಡುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.