ADVERTISEMENT

ಮೀನು ತಿನ್ನುವಾಗ ಮೊಬೈಲ್ ಕಳವು

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2018, 20:11 IST
Last Updated 5 ನವೆಂಬರ್ 2018, 20:11 IST

ಮೈಸೂರು: ಇಲ್ಲಿನ ಜಯಚಾಮರಾಜ ಒಡೆಯರ್ (ಹಾರ್ಡಿಂಗ್) ವೃತ್ತದಲ್ಲಿ ಕುಮಾರ್ ಎಂಬುವವರು ಮೀನಿನ ಅಂಗಡಿ ಬಳಿ ಮೀನನ್ನು ಸೇವಿಸುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿಯೊಬ್ಬ ಅವರ ಕೈಯಲ್ಲಿದ್ದ ಮೊಬೈಲ್‌ ಕಿತ್ತುಕೊಂಡು ಪರಾರಿಯಾಗಿದ್ದಾನೆ.

ರಾತ್ರಿ 9 ಗಂಟೆ ಸಮಯದಲ್ಲಿ ಕುಮಾರ್ ಅವರು ಒಂದು ಕೈಯಲ್ಲಿ ಮೊಬೈಲ್ ಹಿಡಿದು, ಮತ್ತೊಂದು ಕೈಯಲ್ಲಿ ತಿನಿಸಿನ ತಟ್ಟೆ ಹಿಡಿದುಕೊಂಡಿದ್ದರು. ಈ ವೇಳೆ ಪಕ್ಕದಲ್ಲೇ ತಿಂಡಿ ಸೇವಿಸುತ್ತಿದ್ದ ವ್ಯಕ್ತಿಯೊಬ್ಬ ಮೊಬೈಲ್‌ ಕಿತ್ತುಕೊಂಡು ಓಡಿ ಹೋಗಿದ್ದಾನೆ. ಪ್ರಕರಣ ನಜರ್‌ಬಾದ್ ಠಾಣೆಯಲ್ಲಿ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT