ADVERTISEMENT

ಮೈಸೂರಿನಲ್ಲಿ ಮಂಗಗಳ ಸಾವು: ಸ್ಥಳೀಯರಲ್ಲಿ ಹೆಚ್ಚಿದ ಆತಂಕ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2020, 12:08 IST
Last Updated 20 ಏಪ್ರಿಲ್ 2020, 12:08 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮೈಸೂರು: ಮೈಸೂರು ತಾಲ್ಲೂಕಿನ ಉತ್ತನಹಳ್ಳಿ ಸಮೀಪ ಮೂರು ಮಂಗಗಳು ಮೃತಪಟ್ಟಿದ್ದು, ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ‌

ಹಡಜನ ಗ್ರಾಮದ ಓಶೋ ಆಶ್ರಮದಲ್ಲಿ ಈ ಪ್ರಕರಣ ಸಂಭವಿಸಿದ್ದು, ಇನ್ನು ಎರಡು ಮಂಗಗಳು ಅಸ್ವಸ್ಥಗೊಂಡಿವೆ. ಸುತ್ತಲಿನ ಗ್ರಾಮಸ್ಥರು ಮಂಗನ ಕಾಯಿಲೆ (ಕೆಎಫ್‌ಡಿ) ಶಂಕೆ ವ್ಯಕ್ತಪಡಿಸಿದ್ದಾರೆ.

ಪಶು ಸಂಗೋಪನಾ ಇಲಾಖೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ADVERTISEMENT

‘ಮೇಲ್ನೋಟಕ್ಕೆ ಮಂಗನ ಕಾಯಿಲೆ ಲಕ್ಷಣ ಕಾಣಿಸಿಲ್ಲ. ರೋಗ ನಿರೋಧಕ ದ್ರಾವಣ ಸಿಂಪಡಿಸಿ ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ. ಈ ಮಂಗಳ ರಕ್ತ ಮಾದರಿ ಸಂಗ್ರಹಿಸಿ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳಿಸಿಕೊಡಲಾಗುವುದು’ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಅಜಿತ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.