ಮೈಸೂರು: ಮುಡಾ ನಿವೇಶನಗಳ ಹಂಚಿಕೆ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಶಾಸಕರಾದ ಎಸ್.ಎ. ರಾಮದಾಸ್ ಮತ್ತು ಎಲ್. ನಾಗೇಂದ್ರ ಗುರುವಾರ ಇಲ್ಲಿನ ಲೋಕಾಯುಕ್ತ ಎಸ್.ಪಿ. ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು.
ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ ರಾಮದಾಸ್ ಹಾಗೂ ಸಂಜೆ 5ರಿಂದ ರಾತ್ರಿ 7ರವರೆಗೆ ನಾಗೇಂದ್ರ ವಿಚಾರಣೆ ಎದುರಿಸಿದರು. ಲೋಕಾಯುಕ್ತ ಎಸ್.ಪಿ. ಟಿ.ಜೆ. ಉದೇಶ್ ನೇತೃತ್ವದ ತಂಡವು ವಿಚಾರಣೆ ನಡೆಸಿತು.
ಮುಖ್ಯಮಂತ್ರಿ ಸಿದ್ದರಾಮಯ್ಯರ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ ಬದಲಿ ನಿವೇಶನ ನೀಡುವ ಸಂಬಂಧ ನಿರ್ಣಯ ಕೈಗೊಳ್ಳಲಾದ ಸಭೆಯಲ್ಲಿ ಈ ಇಬ್ಬರೂ ಮುಡಾ ಸದಸ್ಯರಾಗಿ ಪಾಲ್ಗೊಂಡಿದ್ದರು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ಇಬ್ಬರಿಗೂ ನೋಟಿಸ್ ನೀಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.