ಜಿ.ಟಿ.ದಿನೇಶ್ ಕುಮಾರ್
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು (ಮುಡಾ) ಅಕ್ರಮವಾಗಿ ನಿವೇಶನಗಳನ್ನು ಹಂಚಿಕೆ ಮಾಡಿದ್ದ ಪ್ರಕರಣದಲ್ಲಿ ಮುಡಾ ಆಯುಕ್ತರಾಗಿದ್ದ ಜಿ.ಟಿ.ದಿನೇಶ್ ಕುಮಾರ್ ಅವರ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯವು, ಬಳಿಕ ಅವರನ್ನು ವಶಕ್ಕೆ ಪಡೆದುಕೊಂಡಿದೆ.
ಜಿ.ಟಿ.ದಿನೇಶ್ ಕುಮಾರ್ ಅವರ ಅವಧಿಯಲ್ಲಿ, ನಿವೇಶನಗಳ ಅಕ್ರಮ ಹಂಚಿಕೆ ಹೆಚ್ಚಿನ ಸಂಖ್ಯೆಯಲ್ಲಿ ನಡೆದಿದೆ ಎಂದು ಇ.ಡಿ ಹೇಳಿತ್ತು. ಹಾಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ದಾಖಲೆಗಳೊಂದಿಗೆ ಬಂದ ದಿನೇಶ್ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿ, ಹೇಳಿಕೆ ದಾಖಲು ಮಾಡಿಕೊಳ್ಳಲಾಯಿತು. ಬಳಿಕ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದುಕೊಂಡರು ಎಂದು ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಂದ ಸ್ವಾಧೀನಪಡಿಸಿಕೊಂಡ ಜಮೀನಿಗೆ ಪರಿಹಾರಾತ್ಮಕವಾಗಿ 14 ನಿವೇಶನಗಳನ್ನು ಹಂಚಿಕೆ ಮಾಡಿದ್ದ ಪ್ರಕರಣದ ತನಿಖೆ ಆರಂಭಿಸಿದ್ದ ಇ.ಡಿಯು, 1,000ಕ್ಕೂ ಹೆಚ್ಚು ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿರುವುದನ್ನು ಪತ್ತೆ ಮಾಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.