
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮುಡಾದ ಆಯುಕ್ತರಾಗಿದ್ದ ಜಿ.ಟಿ.ದಿನೇಶ್ ಕುಮಾರ್ ಅವರನ್ನು ಮೈಸೂರು ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಮರಳಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.
ದಿನೇಶ್ ವಿಚಾರಣೆಗಾಗಿ ಅವಕಾಶ ಕೇಳಿ ಲೋಕಾಯುಕ್ತ ಪೊಲೀಸರು ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ನಂತರ ಜೈಲಿನಲ್ಲೇ ಅವರ ವಿಚಾರಣೆ ನಡೆಸಿ, ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ನೀಡಬೇಕು ಎಂದು ಮನವಿ ಮಾಡಿದ್ದರು. ಇದನ್ನು ಪುರಸ್ಕರಿಸಿದ ನ್ಯಾಯಾಲಯವು ವಿಚಾರಣೆಗೆ ಮಂಗಳವಾರ ಅವಕಾಶ ನೀಡಿತ್ತು.
ನ್ಯಾಯಾಲಯದ ಆವರಣದಲ್ಲೇ ದಿನೇಶ್ ಕುಮಾರ್‌ನ್ನು ವಶಕ್ಕೆ ಪಡೆದ ಮೈಸೂರು ಲೋಕಾಯಕ್ತ ಎಸ್.ಪಿ. ಉದೇಶ್ ನೇತೃತ್ವದ ತಂಡವು ವಿಚಾರಣೆ ನಡೆಸಿತು. ಗುರುವಾರ (ಡಿ.18)ರಂದು ತನಿಖೆಯ ಅಂತಿಮ ವರದಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.