ADVERTISEMENT

ಮೈಸೂರು | ಬಿಜೆಪಿ ಕಚೇರಿ ಮುತ್ತಿಗೆಗೆ ಯತ್ನ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2024, 23:22 IST
Last Updated 3 ಆಗಸ್ಟ್ 2024, 23:22 IST
<div class="paragraphs"><p>‘ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಬಿಜೆಪಿ– ಜೆಡಿಎಸ್‌ ಹುನ್ನಾರ ನಡೆಸಿವೆ’ ಎಂದು ಆರೋಪಿಸಿ ಅಹಿಂದ ಸಂಘಟನೆಗಳ ಮುಖಂಡರು ಶನಿವಾರ ಮೈಸೂರಿನ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವ ಯತ್ನ ನಡೆಸಿದರು</p></div>

‘ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಬಿಜೆಪಿ– ಜೆಡಿಎಸ್‌ ಹುನ್ನಾರ ನಡೆಸಿವೆ’ ಎಂದು ಆರೋಪಿಸಿ ಅಹಿಂದ ಸಂಘಟನೆಗಳ ಮುಖಂಡರು ಶನಿವಾರ ಮೈಸೂರಿನ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವ ಯತ್ನ ನಡೆಸಿದರು

   

ಮೈಸೂರು: ‘ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಬಿಜೆಪಿ– ಜೆಡಿಎಸ್‌ ಹುನ್ನಾರ ನಡೆಸಿವೆ’ ಎಂದು ಆರೋಪಿಸಿ, ಅಹಿಂದ ಸಂಘಟನೆಗಳ ಮುಖಂಡರು ಶನಿವಾರ ಇಲ್ಲಿನ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ನಡೆಸಿದ ಯತ್ನವನ್ನು ಪೊಲೀಸರು ದೂರದಲ್ಲೇ ತಡೆದರು.

ಜಿಲ್ಲಾ ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಬಿಜೆಪಿ ಕಚೇರಿಯತ್ತ ಮುನ್ನುಗ್ಗಿದ ಮುಖಂಡರನ್ನು ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ ತಡೆದರು. ಆ ವೇಳೆ ಮಾತಿನ ಚಕಮಕಿಯೂ ನಡೆಯಿತು. ಬಿಜೆಪಿ ಕಾರ್ಯಕರ್ತರು ಕೂಡ, ಕಚೇರಿಯತ್ತ ಪ್ರತಿಭಟನಕಾರರು ಬರದಂತೆ ಪಕ್ಷದ ಬಾವುಟಗಳನ್ನು ಹಿಡಿದು ಪ್ರತಿಭಟಿಸಿದರು.

ADVERTISEMENT

ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್‌.ಶಿವರಾಮ್, ‘ಸಿದ್ದರಾಮಯ್ಯ ಅವರ ಅಹಿಂದ ಧ್ವನಿಯನ್ನು ಅಡಗಿಸಲು ಬಿಜೆಪಿ ಮುಂದಾಗಿದೆ. ದಕ್ಷಿಣ ಭಾರತದಲ್ಲಿ ಪಕ್ಷ ವಿಸ್ತರಣೆಗೆ ಸಿದ್ದರಾಮಯ್ಯ ತಡೆಗೋಡೆಯಾಗಿದ್ದು, ಅವರನ್ನು ರಾಜಕೀಯವಾಗಿ ಮುಗಿಸಲು ಸಂಚು ನಡೆದಿದೆ’ ಎಂದರು.

‘ಮುಡಾ ಹಾಗೂ ವಾಲ್ಮೀಕಿ ನಿಗಮದ ಹಗರಣಗಳಲ್ಲಿ ತಮ್ಮ ಪಾತ್ರವಿಲ್ಲವೆಂದು ಸಿದ್ದರಾಮಯ್ಯ ದಾಖಲೆ ಸಮೇತ ತಿಳಿಸಿದ್ದರೂ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಬಿಜೆಪಿ– ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆಯನ್ನು ವಿರೋಧಿಸಿ ಅಹಿಂದ ಸಮುದಾಯಗಳು ಒಗ್ಗಟ್ಟಾಗಿ ಹೋರಾಡಲಿವೆ’ ಎಂದರು.

ವಿವಿಧ ಸಮುದಾಯ ಮುಖಂಡರಾದ ಸುಬ್ರಹ್ಮಣ್ಯ, ಎನ್.ಆರ್.ನಾಗೇಶ್, ರವಿನಂದನ್, ಶಿವಣ್ಣ, ಯೋಗೇಶ್ ಉಪ್ಪಾರ್, ರಾಜಶೇಖರ್, ಲೋಕೇಶ್‌ಕುಮಾರ್ ಮಾದಾಪುರ, ಎಚ್.ಎಸ್.ಪ್ರಕಾಶ್, ಸಿದ್ದು, ದಸಂಸ ಸಂಚಾಲಕ ದೇವಗಳ್ಳಿ ಸೋಮಶೇಖರ್, ಮಲ್ಲೇಶ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.