ADVERTISEMENT

MUDA | 134 ಪ್ರಕರಣ ದಾಖಲು: ಮತ್ತಷ್ಟು ಮಂದಿಗೆ ಲೋಕಾಯುಕ್ತ ನೋಟಿಸ್

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2026, 0:30 IST
Last Updated 11 ಫೆಬ್ರುವರಿ 2026, 0:30 IST
ಮುಡಾ ಕಚೇರಿ
ಮುಡಾ ಕಚೇರಿ   

ಮೈಸೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ (ಈಗಿನ ಎಂಡಿಎ) ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಇಲ್ಲಿನ ಲೋಕಾಯುಕ್ತ ಪೊಲೀಸರು ಇನ್ನಷ್ಟು ಮಂದಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.

ಮುಡಾದಲ್ಲಿ 50:50 ಅನುಪಾತದಲ್ಲಿ ನಿವೇಶನಗಳ ಅಕ್ರಮ ಹಂಚಿಕೆ, ಬದಲಿ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮಕ್ಕೆ ಸಂಬಂಧಿಸಿ ಈವರೆಗೆ 134 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ವಿಚಾರಣೆ ಕೈಗೆತ್ತಿಕೊಂಡಿದ್ದಾರೆ.

‘ಸದ್ಯ 30–40 ಅನುಪಾತದಲ್ಲಿ ನಿವೇಶನ ಹಂಚಿಕೆಯ ಪ್ರಕರಣಗಳ ವಿಚಾರಣೆ ನಡೆದಿದ್ದು, ಅವುಗಳಿಗೆ ಸಂಬಂಧಿಸಿದವರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುತ್ತಿದೆ. ಮೂರ್ನಾಲ್ಕು ತಿಂಗಳಿಂದ ಈ ಪ್ರಕ್ರಿಯೆ ನಡೆದಿದೆ’ ಎಂದು ಲೋಕಾಯುಕ್ತದ ಮೈಸೂರು ಎಸ್‌ಪಿ ಟಿ.ಜೆ.ಉದೇಶ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.