
ಪ್ರಜಾವಾಣಿ ವಾರ್ತೆ
ಮೈಸೂರು: ದಮನಿತ ಹಿಂದುಳಿದ ಜಾತಿಗಳ ಆರ್ಥಿಕ ಮತ್ತು ರಾಜಕೀಯ ಹಿತ ಕಾಯುವ ದೃಷ್ಟಿಯಿಂದ ‘ಕರ್ನಾಟಕ ರಾಜ್ಯ ದಮನಿತ ಹಿಂದುಳಿದ ಜಾತಿಗಳ ಒಕ್ಕೂಟ’ ಅಸ್ತಿತ್ವಕ್ಕೆ ತರಲಾಗಿದೆ.
ಚಲನಚಿತ್ರ ನಟ ‘ಮುಖ್ಯಮಂತ್ರಿ’ ಚಂದ್ರು ಅವರನ್ನು ಒಕ್ಕೂಟದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಮೂವರು ಗೌರವಾಧ್ಯಕ್ಷರು, ಇಬ್ಬರು ಕಾರ್ಯಾಧ್ಯಕ್ಷರು, ಒಬ್ಬರು ಪ್ರಧಾನ ಕಾರ್ಯದರ್ಶಿ, ಒಬ್ಬರು ಖಜಾಂಚಿ ಮತ್ತು ಸಿ.ಎಸ್. ದ್ವಾರಕಾನಾಥ್ ಅವರು ಗೌರವ ಸಲಹೆಗಾರರಾಗಿದ್ದಾರೆ. ಜೊತೆಗೆ ಕಾರ್ಯಕಾರಿ ಸಮಿತಿ ಸದಸ್ಯರೂ ಇದ್ದಾರೆ.
ದಮನಿತ ಹಿಂದುಳಿದ ಜಾತಿಗೆ ಸೇರಿದ ಹಲವು ಗಣ್ಯರು ಒಕ್ಕೂಟದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ವಕೀಲ, ಪ್ರಧಾನ ಕಾರ್ಯದರ್ಶಿ ಎ.ಎಚ್. ಪ್ರಶಾಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.