ADVERTISEMENT

ಎಚ್.ಡಿ.ಕೋಟೆ: ಕೊಲೆ ಆರೋಪಿ ತೌಹೀದ್ ಪಾಷಾ ಬಂಧನ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2025, 7:08 IST
Last Updated 20 ಡಿಸೆಂಬರ್ 2025, 7:08 IST
ತೌಹೀದ್ ಪಾಷಾ
ತೌಹೀದ್ ಪಾಷಾ   

ಎಚ್.ಡಿ.ಕೋಟೆ: ಪಟ್ಟಣದ ಮುಸ್ಲಿಂ ಬ್ಲಾಕ್‌ನಲ್ಲಿ ಈಚೆಗೆ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತೌಹೀದ್ ಪಾಷಾನನ್ನು ಪಟ್ಟಣದ ಪೊಲೀಸರು ಬಂಧಿಸಿದರು.

‘ಕ್ಷುಲ್ಲಕ ವಿಚಾರಕ್ಕೆ ಮುಸ್ಲಿಂ ಬ್ಲಾಕ್ ನಿವಾಸಿ ಕಲಾಂಗೆ ತೌಹೀದ್ ಪಾಷಾ ದೊಣ್ಣೆಯಿಂದ ಹೊಡೆದು ಹತ್ಯೆ ಮಾಡಿ ಪರಾರಿಯಾಗಿದ್ದ. ಆರೋಪಿ ಬಂಧನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಮಾರ್ಗದರ್ಶನದಲ್ಲಿ 2 ತಂಡ ರಚಿಸಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿ ಹುಣಸೂರು ಪಟ್ಟಣದಲ್ಲಿ ಇರುವ ಖಚಿತ ಮಾಹಿತಿ ಮೇರೆಗೆ ಗುರುವಾರ ತಡರಾತ್ರಿ ದಾಳಿ ನಡೆಸಿ ಬಂಧಿಸಲಾಯಿತು’ ಎಂದು ‍ಪಟ್ಟಣದ ಪೊಲೀಸರು ಮಾಹಿತಿ ನೀಡಿದರು.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ADVERTISEMENT

ಸರ್ಕಲ್‌ ಇನ್‌ಸ್ಪೆಕ್ಟರ್‌ ಗಂಗಾಧರ್, ಸೈಯ್ಯದ್ ಕಬೀರ್ ಉಲ್ಲಾ, ಯೋಗೇಶ, ಮೋಹನ್, ಬೀರಪ್ಪ, ಮಹೇಶ್‌ ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.