ಮೈಸೂರು: ಜೆ.ಪಿ.ನಗರದಲ್ಲಿ ಜೆಎಸ್‌ಎಸ್ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ನಡುವೆ ನಡೆದ ಹೊಡೆದಾಟದಲ್ಲಿ ತೀವ್ರ ಗಾಯಗೊಂಡಿದ್ದ ಕೃಷ್ಣ (17), ಬುಧವಾರ ಮೃತಪಟ್ಟಿದ್ದಾರೆ.
ಈ ಕೊಲೆ ಸಂಬಂಧ ಕಾನೂನು ಸಂಘರ್ಷ ಎದುರಿಸುತ್ತಿರುವ ಮತ್ತೊರ್ವ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.
‘ಮಂಗಳವಾರ ಪರಚಿ ಗಾಯಗೊಳಿಸಿದ ಕಾರಣಕ್ಕೆ ಆರಂಭವಾದ ಜಗಳದಲ್ಲಿ ಮಹದೇವಪುರ ನಿವಾಸಿ ಕೃಷ್ಣ ಅವರಿಗೆ ಆರೋಪಿ ವಿದ್ಯಾರ್ಥಿಯು ಮುಷ್ಠಿಯಲ್ಲಿ ಕತ್ತಿನ ಭಾಗಕ್ಕೆ ಹೊಡೆದಿದ್ದಾನೆ. ತೀವ್ರ ಅಸ್ವಸ್ಥಗೊಂಡಿದ್ದ ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕನ ಪೋಷಕರು ನೀಡಿದ ದೂರನ್ನು ಆಧರಿಸಿ ವಿದ್ಯಾರಣ್ಯಪುರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.